ಬೀದರ್‌ | ಪರಿಸರ ಪ್ರೇಮಿ ರಿಯಾಜ್‌ ಪಾಶಾಗೆ ಜೀವ ವೈವಿಧ್ಯ‌ ಪ್ರಶಸ್ತಿ ಪ್ರದಾನ

Date:

ಔರಾದ ತಾಲೂಕಿನ ಕೊಳ್ಳೂರು ಗ್ರಾಮದ ಪರಿಸರ ಪ್ರೇಮಿ ರಿಯಾಜ್‌ ಪಾಶಾ ಅವರಿಗೆ ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಿದರು.

ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ರಿಯಾಜ್‌ ಅವರು ಕೆಲವು ವರ್ಷಗಳಿಂದ ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು, ವಿವಿಧ ಅವಘಡದಿಂದ ಗಾಯಗೊಂಡ ಪಕ್ಷಿ, ಪ್ರಾಣಿಗಳಿಗೆ ಚಿಕಿತ್ಸೆ ಕೊಡಿಸಿ ಪ್ರಾಣಾಪಾಯದಿಂದ ರಕ್ಷಿಸುವ ಮೂಲಕ ಜೀವ ವೈವಿಧ್ಯತೆಯ ಸಂರಕ್ಷಣೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಕೊಡುಮಾಡುವ 2023ನೇ ಸಾಲಿನ ಜೀವ ವೈವಿಧ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಿಯಾಜಪಾಶಾ ಅವರು ಸಹಬಾಳ್ವೆ ಸಂಸ್ಥೆಯ ಸದಸ್ಯರಾಗಿ ಪರಿಸರ ಹಾಗೂ ಜೀವ ಸಂಕುಲ ಉಳುವಿಗಾಗಿ ಎಲೆಮರೆ ಕಾಯಿಯಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದನ್ನು ಗುರುತಿಸಿ ಕರ್ನಾಟಕ ಸರ್ಕಾರ 2023ನೇ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದ್ದು ಜಿಲ್ಲೆಗೆ ಹೆಮ್ಮೆ ತಂದಿದೆ ಎಂದು ಸಹಬಾಳ್ವೆ ಸಂಸ್ಥೆ ಅಧ್ಯಕ್ಷ ವಿಶ್ವನಾಥ್ ಸ್ವಾಮಿ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಸಮಾರಂಭದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಬ್ರೀಜೇಶ್ ಕುಮಾರ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಜಗತ್ ರಾಮ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...