ಬಿಜೆಪಿಯವರು ಯಾವಾಗಲೂ ಕೆಟ್ಟ ಇತಿಹಾಸ ಸೃಷ್ಟಿಸುತ್ತಾರೆ: ಲಕ್ಷ್ಮಣ ಸವದಿ ವಾಗ್ದಾಳಿ

Date:

  • ‘ಪ್ರತಿಪಕ್ಷದ ನಾಯಕನಿಲ್ಲದೇ ಅಧಿವೇಶನ ನಡೆದಿರುವುದು ದುರುಂತ’
  • ಅಕಸ್ಮಾತ್‌ ಸಿಟಿ ರವಿ ಬಿಜೆಪಿ ಅಧ್ಯಕ್ಷರಾದರೆ ಅದು ದುರ್ದೈವದ ಸಂಗತಿ

ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಈವರೆಗೂ ವಿಧಾನಸಭಾ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರತಿಪಕ್ಷದ ನಾಯಕನಿಲ್ಲದೇ ಅಧಿವೇಶನ ನಡೆದಿರುವುದು ದುರಂತದ ಸಂಗತಿ ಎಂದು ಶಾಸಕ ಲಕ್ಷ್ಮಣ ಸವದಿ ಕುಟುಕಿದರು.

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ಇತಿಹಾಸದಲ್ಲಿ ಮೊದಲು. ಇಂತಹ ಕೆಟ್ಟ ಇತಿಹಾಸವನ್ನು ಬಿಜೆಪಿಯವರು ಸೃಷ್ಟಿಸುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

“ಹೊಸದಾಗಿ ಸರ್ಕಾರ ರಚನೆಯಾಗಿದೆ. ಎಲ್ಲ ಶಾಸಕರು ತಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸುವುದು ಸಾಮಾನ್ಯ. ರಾಜ್ಯ ಕಾಂಗ್ರೆಸ್‌ ನಾಯಕರ ಸಭೆಯನ್ನು ರಾಹುಲ್‌ ಗಾಂಧಿ ಕರೆದಿದ್ದರು. ಪ್ರತಿಪಕ್ಷಗಳ ಸಭೆಯ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಮುಂದಕ್ಕೆ ಹೋಗಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಗಸ್ಟ್ 2ರಂದು ಸಭೆ ಕರೆದಿದ್ದಾರೆ. ಆ ಸಭೆಗೆ ಹೋಗುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?

ಲೋಕಸಭೆ ಚುನಾವಣೆಯಲ್ಲಿ ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಅವರಿಗೆ ಹೊಸ ಟಾಸ್ಕ್‌ ನೀಡಲಾಗಿದೆಯಂತೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಅದು ಟಾಸ್ಕ್ ಅಲ್ಲ. ಒಂದು ಪಕ್ಷದಲ್ಲಿದ್ದಾಗ ಕೊಡುವ ಜವಾಬ್ದಾರಿ. ಓಡಾಡಿ ಕೆಲಸ ಮಾಡಬೇಕು” ಎಂದರು.

ಸಿ ಟಿ ರವಿ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, “ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ಯಾರು ಆಗುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ಅಕಸ್ಮಾತ್‌ ಸಿಟಿ ರವಿ ಅಧ್ಯಕ್ಷರಾದರೆ ಅದು ದುರ್ದೈವದ ಸಂಗತಿ. ಅಧ್ಯಕ್ಷರಾಗಿ ರವಿ ಆ ಪಕ್ಷದಲ್ಲಿ ಬೆಳೆಯುತ್ತಾನೆ ಎಂದರೆ ಶುಭಕೋರುವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...