ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ಬಿಜೆಪಿಗರ ದಾಂಧಲೆ

Date:

ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲವೆಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿಯೂ ಪ್ರತಿಭಟನೆ ನಡೆಸಿರುವ ಬಿಜೆಪಿಗರು ಅಲ್ಲಿನ ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

ಹಾಲು ಉತ್ಪಾದಕರ ಪ್ರೋತ್ಸಾಹ ಧನ ನೀಡಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೂ ಕತ್ತರಿ ಹಾಕಲಾಗಿದೆ. ಶ್ರೀಘ್ರವೇ ಪೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಸಂಸದ ಡಿ.ಕೆ ಸುರೇಶ್‌ ವಿರುದ್ಧವೂ ಘೋಷಣೆ ಕೂಗಿದ್ದಾರೆ.

ಬಿಜೆಪಿಗರನ್ನು ತಡೆಯಲು ಬಂದ ಪೊಲೀಸರೊಂದಿಗೆ ನೂಕಾಟ ನಡೆಸಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ನುಗ್ಗಿದ್ದ ಬಿಜೆಪಿಗರನ್ನು ಪೊಲೀಸರು ಹೊರಕ್ಕೆ ಎಳೆತಂದಿದ್ದಾರೆ. ಸುಮಾರು 30 ಮಂದಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...