ಮತಾಂತರ ನಿಷೇಧ ಕಾಯ್ದೆ ‌ರದ್ದಿಗೆ ಮುಂದಾದ ಕಾಂಗ್ರೆಸ್ ಮೇಲೆ ಬಿಜೆಪಿಗರಿಂದ ಟೀಕಾ ಪ್ರಹಾರ

Date:

  • ‘ಮತಾಂತರ ನಿಷೇಧ ಕಾಯ್ದೆ’ ಹಿಂಪಡೆಯುವ ಕಾಂಗ್ರೆಸ್‌ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ
  • ಯಾವ “ಮಾಫಿಯಾ” ಈ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ: ಯತ್ನಾಳ

‘ಮತಾಂತರ ನಿಷೇಧ ಕಾಯ್ದೆ’ ಹಿಂಪಡೆಯುವ ತೀರ್ಮಾನ ಮಾಡಿರುವ ಕಾಂಗ್ರೆಸ್‌ ಸರ್ಕಾರ ಮತ್ತೆ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಅಲ್ಪಸಂಖ್ಯಾತರ ಓಲೈಕೆಗಾಗಿ ಸದಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಾಂಗ್ರೆಸ್‌ ಬಲವಂತದ ಮತಾಂತರ, ಲವ್‌ ಜಿಹಾದ್‌ʼನಂತಹ ಪ್ರಕರಣಗಳಿಗೆ ಗ್ರೀನ್‌ ಸಿಗ್ನಲ್‌ ನೀಡಿದೆ” ಎಂದು ದೂರಿದ್ದಾರೆ.

“ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ʼಗೆ ಧಿಕ್ಕಾರವಿರಲಿ. ಹಿಂದೂಗಳು ಈಗ ಜಾಗೃತರಾಗಿದ್ದಾರೆ. ನಿಮ್ಮ ಓಲೈಕೆಯ ಆಟ ಇನ್ನು ನಡೆಯದು. ಹಿಂದೂಗಳನ್ನು ರದ್ದಿ ಕಾಗದದಂತೆ ಬಳಸುವ ನಿಮ್ಮ ದಾರ್ಷ್ಟ್ಯಕ್ಕೆ ಶೀಘ್ರವೇ ಉತ್ತರ ಸಿಗಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯತ್ನಾಳ್‌ ಕಿಡಿ

“ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು “ಹಿಂದೂ” ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ “ಮಾಫಿಯಾ” ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ” ಎಂದು ಬಸನಗೌಡ ಪಾಟೀಲ ಯತ್ನಾಳ್‌ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರವಿರೋಧಿ ಧೋರಣೆ

“ರಾಷ್ಟ್ರಹಿತ, ರೈತ ಹಿತ ಮತ್ತು ಸಂಸ್ಕೃತಿಯ ರಕ್ಷಣೆಯ ಭಾಗವಾಗಿ ನಮ್ಮ ಸರ್ಕಾರ ಎಪಿಎಂಸಿ ಕಾಯ್ದೆ, ಪಠ್ಯ ಪರಿಷ್ಕರಣೆ, ಮತಾಂತರ ನಿಷೇಧ ಮುಂತಾದ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ರಾಜಕೀಯವಾಗಿ ನಮ್ಮನ್ನು ವಿರೋಧಿಸುವ ಭರದಲ್ಲಿ ಅವುಗಳನ್ನು ಹಿಂತೆಗೆದುಕೊಳ್ಳುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್‌ ರಾಷ್ಟ್ರವಿರೋಧಿ ಮತ್ತು ರೈತವಿರೋಧಿ ಧೋರಣೆಗಳನ್ನು ಪ್ರದರ್ಶಿಸುತ್ತಿದೆ” ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

“ಸಿದ್ದರಾಮಯ್ಯ ಅವರ ಸರ್ಕಾರ ನಿತ್ಯವೂ ಹೊಸ ಅಧಃಪತನ ಕಾಣುತ್ತಿದೆ. ದೇಶವನ್ನೇ ಶಿಥಿಲಗೊಳಿಸಲು ಹವಣಿಸುತ್ತಿರುವ ಕಾಂಗ್ರೆಸ್ ಜನರ‌ ಭಾವನೆಗಳಿಗೆ ಕೊಳ್ಳಿ‌ ಇಡುವ ಮೂಲಕ ಸ್ವತಃ ಶಿಥಿಲಗೊಳ್ಳಲಿದೆ” ಎಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...