ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು

Date:

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ಬೆಂಗಳೂರಿನ ಸಿಸಿಹೆಚ್ 82ರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್‌ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಮತಗಳವು ಆರೋಪಕ್ಕೆ ಸಂಬಂಧಿಸಿದಂತೆ ಸುಭಾಷ್ ಗುತ್ತೇದಾರ್ ಮನೆ ಮೇಲೆ ಇತ್ತೀಚೆಗೆ ಎಸ್‌ಐಟಿ ದಾಳಿ ನಡೆಸಿದೆ. ಹಾಗೆಯೇ ಸಿಐಡಿ ನೋಟಿಸ್ ನೀಡಿದೆ. ಇದಾದ ಬೆನ್ನಲ್ಲೇ ಸುಭಾಷ್‌ ಗುತ್ತೇದಾರ್‌ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ಲಭಿಸಿದ್ದು, ಮಾಜಿ ಶಾಸಕರು ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಇದನ್ನು ಓದಿದ್ದೀರಾ? ಮತಗಳವು ಆರೋಪ: ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ಎಸ್‌ಐಟಿ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಳಂದದಲ್ಲಿ ಸುಮಾರು ಆರು ಸಾವಿರ ಮತಗಳ ಡಿಲೀಟ್ ಯತ್ನ ನಡೆದಿದೆ ಎಂದು ಇತ್ತೀಚೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೂ ಆರೋಪಿಸಿದ್ದರು. ಈ ಸಂಬಂಧ ಕೆಲವು ಪುರಾವೆಗಳನ್ನೂ ಬಹಿರಂಗಪಡಿಸಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.

ಇತ್ತೀಚೆಗೆ 100ಕ್ಕೂ ಹೆಚ್ಚು ಪೊಲೀಸರ ಜೊತೆ ಎಸ್​​ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಅವರ ಮನೆಯಲ್ಲಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಜತೆಗೆ ಸುಭಾಷ್ ಅವರ ಒಡೆತನದ ವೈನ್‌ ಶಾಪ್ ಸೇರಿದಂತೆ ಹಲವು ಕಡೆದ ದಾಳಿ ನಡೆದಿತ್ತು.

ಈ ನಡುವೆ ಅಮರ್ಜಾ ನದಿಯ ಹಿನ್ನೀರಿನಲ್ಲಿ ಅರ್ಧಂಬರ್ಧ ಸುಟ್ಟ ದಾಖಲೆ ಪತ್ತೆಯಾಗಿದ್ದವು. ಬೆಂಕಿ ಇಟ್ಟ ದಾಖಲೆಗಳು, ಬೂದಿಯನ್ನು ಇಲ್ಲಿ ತಂದು ಸುರಿದಿದ್ದು ಯಾರು ಎಂಬುದು ಗೊತ್ತಾಗಿರಲಿಲ್ಲ. ಗೂಡ್ಸ್ ವಾಹನದಲ್ಲಿ ಅರೆಸುಟ್ಟ ಕಾಗದಗಳನ್ನು ಸಾಗಿಸಿರುವುದಕ್ಕೆ ಸಾಕ್ಷಿ ಸಿಕ್ಕಿದ್ದು, ವಾಹನ ಜಪ್ತಿ ಮಾಡಲಾಗಿದೆ. ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...