ಇಂತಹ ಕೆಟ್ಟ ಸರ್ಕಾರ ಕಿತ್ತೊಗೆಯಲು ಬಿಜೆಪಿ-ಜೆಡಿಎಸ್‌ ಮೈತ್ರಿ ಅಗತ್ಯ: ರಮೇಶ ಜಾರಕಿಹೊಳಿ

Date:

  • ಕುಮಾರಸ್ವಾಮಿ ಭೇಟಿ ಬಳಿಕ ರಮೇಶ ಜಾರಕಿಹೊಳಿ ಹೇಳಿಕೆ
  • ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಬಂದಿದ್ದೆ: ಸ್ಪಷ್ಟನೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಚಾರ ಬಿಜೆಪಿ ನಾಯಕರಿಂದಲೇ ಒಡಮೂಡುತ್ತಿದ್ದು, ಈ ನಡುವೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಸೋಮವಾರ ದಿಢೀರ್‌ ಆಗಿ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಮುರಿದು ಬೀಳಲು ಪ್ರಮುಖ ಕಾರಣರಾಗಿದ್ದ ರಮೇಶ ಜಾರಕಿಹೊಳಿ ದಿಢೀರ್‌ ಆಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಹೆಚ್ಚಿಸಿದೆ.

ಕುಮಾರಸ್ವಾಮಿ ಅವರ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, “ಇತ್ತೀಚೆಗೆ ಅನಾರೋಗ್ಯದಿಂದ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ನಾನು ರಾಜ್ಯದಲ್ಲಿ ಇರಲಿಲ್ಲ. ಈಗ ಬಂದು ಅವರ ಆರೋಗ್ಯ ವಿಚಾರಿಸಿರುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೂವರು ಡಿಸಿಎಂ ಹೇಳಿಕೆ ಬಗ್ಗೆ ಸಿಎಂ ಉತ್ತರಿಸುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಆ ಬಳಿಕ ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ”ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಇಂತಹ ಕೆಟ್ಟ ಸರ್ಕಾರ ಕಿತ್ತೊಗೆಯಲು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಗತ್ಯವಾಗಿದೆ” ಎಂದರು.

ಮತ್ತೆ ಕಾಂಗ್ರೆಸ್‌ ಸರ್ಕಾರ ಬಿಳಿಸುತ್ತೀರಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ಎಲ್ಲ ಹೇಳಿ ಮಾಡಲು ಆಗುವುದಿಲ್ಲ” ಎಂದಷ್ಟೇ ಹೇಳಿ ಕಾರು ಹತ್ತಿ ಹೊರಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...