ಮರು ಮತಾಂತರಕ್ಕೆ ಸಾಮ, ದಾನ, ಭೇದ, ದಂಡ ಬಳಸಬೇಕಿದೆ: ಸಿ ಟಿ ರವಿ

Date:

ಸಾಮ, ದಾನ, ಭೇದ, ದಂಡ ಬಳಸಿ ಮರು ಮತಾಂತರಕ್ಕೆ ಮುಂದಾಗುವ ಅನಿವಾರ್ಯತೆ ಇದೆ. ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವುದರಿಂದ ದೇಶ ಮತ್ತು ಹಿಂದೂ ಧರ್ಮ ಉಳಿಸಿಕೊಳ್ಳಲು ಎಲ್ಲ ಸಮುದಾಯದ ಮಠಾಧೀಶರು ಮಹಾ ಪಂಚಾಯತ್ ಕರೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮನ್ನು ನಾವು ಉಳಿಸಿಕೊಳ್ಳಲು ಸ್ವರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಬೇರೆ ಬೇರೆ ಕಾರಣಕ್ಕೆ ಹಿಂದೂ ಧರ್ಮದಿಂದ ಹೊರ ಹೋದವರನ್ನು ಮರಳಿ ಕರೆತರಬೇಕಾದ ಅವಶ್ಯಕತೆ ಇದೆ. ಕಾಂಗ್ರೆಸ್‌ಗೆ ಅಂಬೇಡ್ಕರ್ ಕಂಡರೆ ಮಾತ್ರ ಅಸಹನೆ ಎಂದುಕೊಂಡಿದ್ದೆ. ಭಗತ್ ಸಿಂಗ್, ರಾಜಗುರು, ಸುಖದೇವ್ ಬಗ್ಗೆಯೂ ಅಸಹನೆ ಇದೆ ಎಂಬುದು ಅರ್ಥವಾಗಿದೆ. ನಾವು ಇದೇ ಪಠ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ತಪ್ಪು ಹುಡುಕಲು ಜನರನ್ನು ಕೇಳುತ್ತೇವೆ”’” ಎಂದು ಸಿ ಟಿ ರವಿ ಹೇಳಿದರು.

ಈ ಸುದ್ದಿ ಓದಿದ್ದೀರಾ? 35 ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಸಿಎಂ ಸ್ಥಾನ ನೀಡಿಲ್ಲ: ಬೊಮ್ಮಾಯಿ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಕುರಿತ ಪಾಠವನ್ನು ಪಠ್ಯದಿಂದ ಕೈಬಿಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ಬರೆದಿದ್ದ ಲೇಖನ ದೇಶಪ್ರೇಮಿಗಳ ಬಗ್ಗೆಯೇ ಹೊರತು ಸೂಲಿಬೆಲೆ ಜೀವನ ಚರಿತ್ರೆ ಅಲ್ಲ. ಹೆಡಗೇವಾರ್ ಅವರ ಪಾಠವನ್ನೂ ಕೈಬಿಡಲಾಗಿದೆ. ಕಾಂಗ್ರೆಸ್ ನಾಯಕರಿಗೆ ದೇಶಭಕ್ತಿ ಎಂದರೆ ಅಸಹನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ ಜತೆ ರಾಹುಲ್ ಗಾಂಧಿ ಒಪ್ಪಂದ ದೇಶಭಕ್ತಿಗೆ ವಿರುದ್ಧವಾದುದು ಎಂಬ ಅನುಮಾನ ಬರುತ್ತಿದೆ’ ಎಂದರು.

ಎಪಿಎಂಸಿ ತಿದ್ದುಪಡಿ ಕಾಯ್ದೆಯಲ್ಲಿ ರೈತರೂ ಉದ್ದಿಮೆದಾರರಾಗುವ ಅವಕಾಶ ಇತ್ತು. ಅದನ್ನು ಹಿಂಪಡೆಯುವ ಮೂಲಕ ರೈತರನ್ನು ದಲ್ಲಾಳಿಗಳ ಕಪಿಮುಷ್ಠಿಯಲ್ಲಿ ಸಿಲುಕಿಸುವುದು ಕಾಂಗ್ರೆಸ್ ಉದ್ದೇಶ. ಕಾಂಗ್ರೆಸ್ ಸುಳ್ಳು ಹೇಳಿ ರೈತರ ದಿಕ್ಕು ತಪ್ಪಿಸಿದೆ. ಸದ್ಯದಲ್ಲೇ ಸತ್ಯ ರೈತರಿಗೆ ಅರಿವಾಗಲಿದೆ ಎಂದು ರವಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...