ಇಬ್ಬರು ಕಾಂಗ್ರೆಸ್, ಒಬ್ಬರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿ ನಾಯಕ ಸತ್ಯಜಿತ್ ಕರೆ

Date:

ರಾಜ್ಯದಲ್ಲಿ ಬಿಜೆಪಿಯಿಲ್ಲ. ವಿಧಾನಸಭೆ ಚುನಾವಣೆವರೆಗೆ ಬಿಎಲ್‌ಪಿ (ಬಿಎಲ್ ಸಂತೋಷ್ ಪಾರ್ಟಿ) ಇತ್ತು. ಈಗ ಬಿಎಸ್‌ಪಿ (ಬಿಎಸ್ ಯಡಿಯೂರಪ್ಪ ಪಾರ್ಟಿ) ಇದೆ. ಯಾರು ಅವರ ಹಿಂದೆ ನೇತಾಡುತ್ತಾರೆ, ಬಕೆಟ್ ಹಿಡಿಯುತ್ತಾರೆ, ಜೈ ಅನ್ನುತ್ತಾರೆ, ಅವರಿಗೆ ಮಾತ್ರ ಅವಕಾಶವಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮಾಜಿ ನಾಯಕ, ನಾರಾಯಣಗುರು ವಿಚಾರ ವೇದಿಕೆಯ ಅಧ್ಯಕ್ಷ ಸತ್ಯಜಿತ್‌ ಸುರತ್ಕಲ್ ಟೀಕಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಟಿ ನಡೆಸಿ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಅವರಿಗೆ ಟಿಕೆಟ್ ಕೊಡದಿರುವ ಬಗ್ಗೆ ಮಾತನಾಡಿದರು.

“ನಾನು ಹುಟ್ಟಿದ ಜಾತಿ, ಊರು ಸರಿಯಲ್ಲ. ನಾನು ಬ್ರಾಹ್ಮಣ, ಒಕ್ಕಲಿಗ, ಬಂಟ, ಲಿಂಗಾಯತನಾಗಿ ಹುಟ್ಟಿದ್ದರೆ ಅವಕಾಶ ಸಿಗುತ್ತಿತ್ತು. ಶೂದ್ರ ಸಮಾಜದಲ್ಲಿ ಹುಟ್ಟಿದ್ದರಿಂದ ಸೇವೆ ಮಾಡಲು ಮಾತ್ರ ನನಗೆ ಅವಕಾಶವಿದೆ. ಆದ್ದರಿಂದ ಶೂದ್ರರು ತಾವಾಗಿಯೇ ಸ್ಥಾನ ಕೇಳಲು ಹೋಗಬಾರದು. ಇಲ್ಲಿ ನಾಯಕರು ಹೇಳಿದಂತೆ, ಬಾಲ ಮುದುರಿಕೊಂಡು ಬಕೆಟ್ ಹಿಡಿಯುವವರಿಗೆ, ಗುಲಾಮರಿಗೆ ಮಾತ್ರ ಬೆಲೆ. ಸ್ವಂತ ಶಕ್ತಿ ಇರುವವರಿಗೆ ಬೆಲೆಯಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಟ ಶ್ರೀನಿವಾಸ ಪೂಜಾರಿಯವರಿಗೆ ಟಿಕೆಟ್ ಕೊಡುವ ಮೂಲಕ ಬಿಜೆಪಿ ಬಿಲ್ಲವ ಸಮಾಜಕ್ಕೆ ಅನ್ಯಾಯ ಮಾಡಿದೆ. ಕೋಟ ಅವರು ಎಂಎಲ್‌ಸಿ ಹಾಗೂ ವಿಧಾನಪರಿಷತ್‌ನ ವಿಪಕ್ಷ ನಾಯಕನ ಹುದ್ದೆಯಲ್ಲಿದ್ದವರು. ಇಂತಹ ಹುದ್ದೆ ಈ ಸಮಾಜಕ್ಕೆ ಮತ್ತೆ ದೊರಕಲು ಸಾಧ್ಯವಿಲ್ಲ. ಸಮಾಜದ ಬೇರೆಯವರಿಗೆ ಬಿಜೆಪಿ ಈ ಟಿಕೆಟ್ ಕೊಟ್ಟಿದ್ದರೆ ಅದಕ್ಕೊಂದು ಬೆಲೆಯಿತ್ತು. ಕೋಟ ಅವರಿಗೆ ಟಿಕೆಟ್ ಕೊಟ್ಟಿರುವುದು ಬಿಲ್ಲವ ಸಮಾಜಕ್ಕೆ ಲಾಭಕ್ಕಿಂತ ಹೆಚ್ಚು ಅನ್ಯಾಯವಾಗಿದೆ” ಎಂದರು.

“ಅನೇಕ ವರ್ಷಗಳ ಬಳಿಕ‌ ಕರಾವಳಿಯಲ್ಲಿ ಬಿಲ್ಲವ ಸಮುದಾಯದ ಮೂವರಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ನೀಡಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಪದ್ಮರಾಜ್, ಉಡುಪಿಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವ ಪ್ರಯತ್ನವನ್ನು ಶ್ರೀ ನಾರಾಯಣಗುರು ವಿಚಾರ ವೇದಿಕೆ ಮಾಡಲಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಿ : ಡಿಸಿ ಗೋವಿಂದರೆಡ್ಡಿ

“ಈ ಮೂವರು ಗೆದ್ದಲ್ಲಿ ಸಮಾಜಕ್ಕೊಂದು ಬಲ ಬರಲಿದೆ‌. ಆದ್ದರಿಂದ ಬಿಲ್ಲವ, ಈಡಿಗ ಸಮಾಜದ ಬಾಂಧವರು ಪಕ್ಷಗಳನ್ನು ಬದಿಗೊತ್ತಿ ಈ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಬೇಕು” ಎಂದು ಸತ್ಯಜಿತ್‌ ಸುರತ್ಕಲ್ ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...