ಬೆಳಗಾವಿ | ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರ

Date:

ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿರುವಾಗಲೇ, ವಿಜಯಪುರ ಕ್ಷೇತ್ರದ ಹಿರಿಯ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶನಿವಾರ (ಮಾ.2) ಬೆಳಗಾವಿಯಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದಾಗ ಬ್ರೈನ್ ಹಾಮರೇಜ್ ನಿಂದ ಜಿಗಜಿಣಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.

ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಬ್ರೇನ್ ಹ್ಯಾಮರೇಜ್ ಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆಯೂ ಜ.28 ರಂದು ಬೆಳಗಾವಿಗೆ ಹೋಗುವಾಗ ಬೀಳಗಿ ಹತ್ತಿರ ಎದೆನೋವು ಕಾಣಿಸಿಕೊಂಡ ಕಾರಣ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚೇತರಿಸಿಕೊಂಡುದ್ದರು. ಚುನಾವಣಾ ಹೊತ್ತಿನಲ್ಲೆ ಪದೆ ಪದೆ ಜಿಗಜಿಣಿ ಅವರಿಗೆ ಆರೋಗ್ಯ ಕೈಕೊಡುತ್ತಿದೆ.

ಈ ಬಾರಿಯೂ ವಿಜಯಪುರ ​ ಮೀಸಲು ಕ್ಷೇತ್ರದಿಂದ ಸ್ಪರ್ಥಿಸುವ ಇಂಗಿತ ವ್ಯಕ್ತಪಡಿಸಿರುವ ಅವರು, ಜೊತೆಗೆ ಬಿಜೆಪಿ ಟಿಕೇಟ್ ನನಗೆ ಸಿಗುವುದಾಗಿ ಬಹಿರಂಗ ಹೇಳಿಕೆಯನ್ನು ನೀಡಿದ್ದರು.

ಆದರೇ ಇದೀಗ ಪದೇ ಪದೇ ಆರೋಗ್ಯ ಕೈಕೊಡುತ್ತಿದ್ದು, ಜೊತೆಗೆ ವಯಸ್ಸಿನ ದೃಷ್ಟಿಯಿಂದ ಈ ಬಾರಿ ಅವರಿಗೆ ಹೈಕಮಾಂಡ್ ಟಿಕೆಟ್ ನೀಡುವುದು ಅನುಮಾನ ಎನ್ನುವ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...