ಕಾವೇರಿ ವಿವಾದ | ಬಿಜೆಪಿಯ ಯಾವ ಸಂಸದನಿಗೂ ನೈಜ ಕಾಳಜಿ ಇಲ್ಲ: ವಿ ಎಸ್‌ ಉಗ್ರಪ್ಪ ಕಿಡಿ

Date:

  • ‘ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ’
  • ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು: ಆಗ್ರಹ

ಕಾವೇರಿ ಸಮಿತಿಯ ಯಾವ ಸದಸ್ಯನೂ ಸ್ಥಳಕ್ಕೆ ಬಂದು ವಸ್ತುಸ್ಥಿತಿ ಅಧ್ಯಯನ ಮಾಡಿಲ್ಲ. ಆದರೂ ಕರ್ನಾಟಕದ ವಿರುದ್ದ ತೀರ್ಪು ನೀಡಿದ್ದಾರೆ. ಕರ್ನಾಟಕದ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದರು ಹಿನ್ನಡೆಯಾಗಿದ್ದು, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮಾಜಿ ಸಂಸದ ವಿ ಎಸ್‌ ಉಗ್ರಪ್ಪ ಹೇಳಿದರು.

ಕೆಪಿಸಿಸಿ ಕಚೇರಿಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ನ್ಯಾಯಲಯವು ನೀರಿನ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಸಂವಿಧಾನದ ಅರ್ಟಿಕಲ್ 262ರಲ್ಲಿ ಉಲ್ಲೇಖವಿದೆ. ಸಂವಿಧಾನದಲ್ಲಿ ಲೋಪವಿದ್ದಾಗ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಬಹುದು ಎನ್ನುವ ಉಲ್ಲೇಖವಿದೆ” ಎಂದರು.

“ಕಾವೇರಿ ನೀರಾವರಿ ನಿರ್ವಹಣಾ ಸಮಿತಿ ಹಾಗು ಕಾವೇರಿ ನೀರು ನಿಯಂತ್ರಣ ಸಮಿತಿಯಲ್ಲಿ ಅಧ್ಯಕ್ಷರೂ ಸೇರಿ 9 ಜನ ಸದಸ್ಯರು ಇರುತ್ತಾರೆ. ಇವರಲ್ಲಿ ಅಧ್ಯಕ್ಷರನ್ನು ಸೇರಿ 5 ಜನರನ್ನು ಕೇಂದ್ರ ಸರ್ಕಾರವೇ ನೇಮಕ ಮಾಡುತ್ತದೆ. ಈ ಸಮಿತಿಯ ಕೆಲಸ ಕಾವೇರಿ ಜಲಾನಯನ ಪ್ರದೇಶದಲ್ಲಿ ಎಷ್ಟು ಮಳೆ ಬೀಳುತ್ತದೆ, ಒಳಹರಿವು, ಹೊರ ಹರಿವು ಎಷ್ಟಿದೆ ಎಂಬುದನ್ನು ಪ್ರತಿದಿನ ಮಾಹಿತಿ ಕಲೆ ಹಾಕಬೇಕು. ಆದರೆ ಇದನ್ನು ಮಾಡದೆ ನಮಗೆ ಮಾರಕವಾದ ತೀರ್ಪು ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರಿಗಾಗಿಯಾದರೂ ಸರ್ಕಾರ ಹೋರಾಟ ಮಾಡಲಿ: ಬೊಮ್ಮಾಯಿ ಆಗ್ರಹ

“ಕೂಡಲೇ ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು. 4 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ನಡುವೆ ಸಂಧಾನ ಮಾಡಬೇಕು. ಬಿಜೆಪಿಯ ಯಾವ ಸಂಸದನಿಗೂ ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲ. ನಮ್ಮನ್ನು ಕೇಳಿ ನೀರು ಬಿಟ್ಟಿದ್ದೀರಾ ಎನ್ನುವ ಉಡಾಫೆಯ ಮಾತುಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಡಿದ್ದಾರೆ” ಎಂದು ಹರಿಹಾಯ್ದರು.

“ಸುಪ್ರೀಂ ಕೋರ್ಟಿಗೆ ಮೊದಲೇ ಅರ್ಜಿ ಹಾಕಬೇಕಿತ್ತು ಎಂದು ಬೊಮ್ಮಾಯಿ ಅವರು ಹೇಳುತ್ತಾರೆ, ಆದರೆ ಸುಪ್ರೀಂ ಕೋರ್ಟಿಗೆ ಈ ವಿಚಾರದಲ್ಲಿ ಸೀಮಿತ ಅಧಿಕಾರ ಮಾತ್ರವಿದೆ. ಇದು ಕಾನೂನಿನ ವಿರುದ್ದವಾಗಿ ಸಲಹೆ ನೀಡುವ ಕೆಲಸ. ಬೊಮ್ಮಾಯಿ ಅವರು ಸ್ವಲ್ಪ ಅಧ್ಯಯನ ಮಾಡಲಿ. ಮುಖ್ಯಮಂತ್ರಿಗಳಾಗಿದ್ದಾಗ ತರಾತುರಿಯಲ್ಲಿ ಎಸ್ಸಿ- ಎಸ್ಟಿ ಮೀಸಲಾತಿ ತಂದರು, ಅದೇ ರೀತಿ ಮಹಿಳಾ ಮೀಸಲಾತಿಯನ್ನು ತರಾತುರಿಯಲ್ಲಿ ತರುವುದಕ್ಕೆ ಮೋದಿಯವರಿಗೆ ಬೊಮ್ಮಾಯಿ ಅವರ ಪ್ರಭಾವ ತಟ್ಟಿದೆ” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...