ಬಿಜೆಪಿಯವರೇ ನನ್ನನ್ನು ಕಾಂಗ್ರೆಸ್‌ಗೆ ಕಳಿಸುವಂತಿದೆ: ಎಸ್‌ ಟಿ ಸೋಮಶೇಖರ್‌

Date:

  • ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಭೇಟಿಗೆ ಅವಕಾಶ ಕೇಳಿರುವೆ
  • ಸ್ಥಳೀಯವಾಗಿ ನನ್ನ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ: ಸೋಮಶೇಖರ್‌

ಯಶವಂತಪುರದ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಸೇರುತ್ತಾರೆ ಎನ್ನುವ ಸುದ್ದಿ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದು, “ಬಿಜೆಪಿಯವರೇ ನನ್ನನ್ನು ಕಾಂಗ್ರೆಸ್‌ಗೆ ಕಳಿಸುವಂತಿದೆ. ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಎಲ್ಲೂ ಹೇಳಿಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಈ ವಿಚಾರವಾಗಿ ಮಾತನಾಡಿದ ಅವರು, “ನಮ್ಮ ಕಾರ್ಯಕರ್ತರ ಜತೆಗೂ ಹೇಳಿಕೊಂಡಿಲ್ಲ. ಬಿಜೆಪಿ ನಾಯಕರ ಬಗ್ಗೆ ಯಾವುದೇ ಅಸಮಾಧಾನ ಇಲ್ಲ” ಎಂದು ಹೇಳಿದ್ದಾರೆ.

“ಇಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್, ಸಿಟಿ ರವಿ ಅವರು ಫೋನ್ ಮಾಡಿದ್ದರು. ಡಿವಿ ಸದಾನಂದಗೌಡ ಅವರು ಮನೆಗೆ ಕರೆಸಿ ಮಾತನಾಡಿದ್ದಾರೆ. ನಾನು ಬಿಜೆಪಿ ಬಿಟ್ಟು ಹೋಗುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಕೆ ಶಿವಕುಮಾರ್‌ ಜೊತೆ ರಾಜಕೀಯವಾಗಿ ಏನು ಮಾತಾಡಿಲ್ಲ. ನಮ್ಮ ಕ್ಷೇತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಬಂದಿದ್ದರು. ನನ್ನ ಕ್ಷೇತ್ರದಲ್ಲಿ ಕುಡಿಯುವ ನೀರು ಸಮಸ್ಯೆ ಇದೆ, ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ಆಗ ಉಪಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಈ ವೇಳೆ ಅವರ ಬಗ್ಗೆ ಒಂದೆರಡು ಒಳ್ಳೆಯ ಮಾತಾಡಿದ್ದು ಹೌದು. ಇದು ಹೊರತು ಪಡಿಸಿ ನಾನು ಅವರ ಜತೆ ರಾಜಕೀಯ ಮಾತುಗಳನ್ನು ಆಡಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ಎರಡು ಸಲ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಮಾಡಿದೀನಿ. ಆದರೆ, ಸ್ಥಳೀಯವಾಗಿ ನನ್ನ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನನ್ನನ್ನು ಸೋಲಿಸಬೇಕು ಎಂದು ಸ್ಥಳೀಯ ಬಿಜೆಪಿಯವರು ವಿಡಿಯೋ ವೈರಲ್‌ ಮಾಡಿದ್ದಾರೆ. ನಾನೇನೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ” ಎಂದರು.

“ಡಿಕೆ ಶಿವಕುಮಾರ್‌ ಅವರನ್ನು ಹೊಗಳಿದ್ದನ್ನೇ ಸ್ಥಳೀಯ ಬಿಜೆಪಿಗರು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ. ಮೈಸೂರಿಗೆ ಹೋಗಿದ್ದಾಗ ಜಿಟಿ ದೇವೇಗೌಡರನ್ನೂ ಹೊಗಳ್ತೀನಿ. ಇದು ನನ್ನ ವೈಯಕ್ತಿಕ ಮಾತು” ಎಂದರು.

“ಮುಂದೆ ಕೂಡ ಬಿಜೆಪಿ ಬಿಡುವ ಯೋಚನೆ ಇಲ್ಲ. ಕಾಂಗ್ರೆಸ್‌ನವರು ಕೂಡ ಪಕ್ಷಕ್ಕೆ ಬನ್ನಿ ಎಂದು ಕರೆದಿಲ್ಲ. ಡಿಕೆ ಶಿವಕುಮಾರ್‌ ಅವರನ್ನು ಹೊಗಳಿದ್ದಕ್ಕೆ ನಾನು ಕಾಂಗ್ರೆಸ್ ಗೆ ಹೋಗುವೆ, ಲೋಕಸಭೆಗೆ ಅಪ್ಪ, ವಿಧಾನಸಭೆಗೆ ಮಗ ಅಂತ ಸೋಷಿಯಲ್ ಮೀಡಿಯಾದಲ್ಲಿ ಬಿಂಬಿಸುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...