ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ; ಸೆ.16ರಿಂದ ರಾಜ್ಯ ಪ್ರವಾಸ ಘೋಷಿಸಿದ ಯಡಿಯೂರಪ್ಪ

Date:

  • ‘ರಾಜ್ಯ ಸರ್ಕಾರ ಡಿಎಂಕೆ ಸರ್ಕಾರವನ್ನು ಓಲೈಸಲು ಕದ್ದುಮುಚ್ಚಿ ನೀರು ಕೊಡುತ್ತಿದೆ’
  • ‘ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಸರ್ಕಾರ ಬಿಡುತ್ತಿಲ್ಲ’

ರಾಜ್ಯ ಕಾಂಗ್ರೆಸ್ ಸರ್ಕಾರ‌ ರೈತ ವಿರೋಧಿ ನೀತಿ ನಡೆಯನ್ನು ಹೊಂದಿದೆ ಎಂದು ಬಿಜೆಪಿ ಆರೋಪಿಸಿ, ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ಖಂಡಿಸಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ ವಿ ಸದಾನಂದಗೌಡ ಹಾಗೂ ಮಾಜಿ ಸಚಿವರಾದ ಆರ್‌ ಅಶೋಕ, ಗೋವಿಂದ ಕಾರಜೋಳ ಅವರ ಮಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಸವರಾಜ ಬೊಮ್ಮಾಯಿ ಪ್ರತಿಭಟನೆಯಲ್ಲಿ ಮಾತನಾಡಿ, “ರಾಜ್ಯ ಸರ್ಕಾರ ತಮಿಳುನಾಡಿನ ಡಿಎಂಕೆ ಸರ್ಕಾರವನ್ನು ಓಲೈಸಲು ಕದ್ದುಮುಚ್ಚಿ ನೀರು ಹರಿಸಿದೆ. ಇದು ನಾಡಿನ ರೈತರು ಮತ್ತು ಜನತೆಗೆ ಮಾಡಿದ ದ್ರೋಹ. ಡಿಸೆಂಬರ್ ವೇಳೆಗೆ ಕುಡಿಯುವ ನೀರು ಸಿಗುವುದೂ ಕಷ್ಟವಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾವೇರಿ ನದಿ ನೀರಿನ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರಿಗೆ ನೀರು ಹರಿಸದೇ ತಮಿಳುನಾಡಿಗೆ ಹರಿಸಿದೆ. ಒಂದು ಕಾಳು ಅಕ್ಕಿಯನ್ನೂ ಕಾಂಗ್ರೆಸ್‌ ಕೊಟ್ಟಿಲ್ಲ, ಅವರು ನೀಚರು” ವಾಗ್ದಾಳಿ ನಡೆಸಿದರು.

“ದೊಡ್ಡ ದೊಡ್ಡ ಆಶ್ವಾಸನೆ ಕೊಟ್ಟು ಸರ್ಕಾರ ಅಧಿಕಾರಕ್ಕೆ ಬಂತು. ಇವರು ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ಕೊಡುತ್ತಿರುವ ಅಕ್ಕಿ. ಕರ್ನಾಟಕದಲ್ಲಿ ಗೃಹಲಕ್ಷಿ ಯೋಜನೆ ಬರುವಂತಹ ದಿನಗಳಲ್ಲಿ ಕಾಂಗ್ರೆಸ್ ಗೆ ಮುಳುವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪಾದಕರ ಬಾಯಿ ಬಡಿಯುವುದು ವಿಕಟ ವಿಡಂಬನೆ 

“ಬೆಂಗಳೂರಿನ ಹೊರ ವಲಯದ ಅಧಿಕಾರಿ 8 ಕೋಟಿ ರೂ. ಕೊಟ್ಟಿದ್ದಾರೆ. ಅವರು ಬೇಡ ಅಂತ ಹೋದರೆ ಅದೇ ಜಾಗಕ್ಕೆ 13 ಕೋಟಿ ರೂ. ಪಡೆದು ನೇಮಕ ಮಾಡಿದ್ದಾರೆ. ಕುಮಾರ ಕೃಪಾದಲ್ಲಿ ದಂಧೆ ನಡೆಯುತ್ತಿದೆ. ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ” ಎಂದು ಆರೋಪಿಸಿದರು.

“ಸಣ್ಣಪುಟ್ಟ ವಿಚಾರಕ್ಕೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತೇನೆ. ನಿಮ್ಮ ನಿಷ್ಠೆ ಕಾನೂನಿಗೆ ಇರಬೇಕು ಹೊರತು ಕಾಂಗ್ರೆಸ್ಸಿಗಲ್ಲ” ಎಂದು ಎಚ್ಚರಿಸಿದರು.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ಮಾತನಾಡಿ, “ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ವಿರುದ್ಧ ಸೆ.16ರಿಂದ ರಾಜ್ಯ ವ್ಯಾಪಿ ಪ್ರವಾಸ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 25 ಸ್ಥಾನಗಳನ್ನು ಗೆಲ್ಲಲು ಶ್ರಮ ಹಾಕೋಣ” ಎಂದರು.

“ಕೋಲಾರದ ಕುರುಡುಮಲೆ ವಿನಾಯಕ ದೇವಸ್ಥಾನದ ಆವರಣದಿಂದ ಪ್ರವಾಸ ಆರಂಭಿಸುತ್ತೇನೆ. ಪಕ್ಷದ ಎಲ್ಲ ನಾಯಕರೂ ಭಾಗವಹಿಸು‌ತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...