ಕಲಾಪ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಮುಂದುವರಿದ ಬಿಜೆಪಿ ಪ್ರತಿಭಟನೆ

Date:

  • ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ
  • ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬಿಜೆಪಿಯ ಹತ್ತು ಶಾಸಕರನ್ನು ಸಭಾಧ್ಯಕ್ಷರು ಅಮಾನತು ಮಾಡಿದ ಕ್ರಮ ಖಂಡಿಸಿ ಬಿಜೆಪಿ ಸದಸ್ಯರು ಶುಕ್ರವಾರ ಕೂಡ ಕಲಾಪದಲ್ಲಿ ಭಾಗಿಯಾಗದೇ ರಾಜ್ಯ ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ.

ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಕೂಡ ಪ್ರತಿಭಟಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದರು.

ಬುಧವಾರದ ಸದನದಲ್ಲಿ ಬಿಜೆಪಿ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮುಖಕ್ಕೆ ಎಸೆದು, ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರು. ನಂತರ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಆ ಹತ್ತು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ

ಶಾಸಕರ ಅಮಾನತು ವಿಚಾರವಾಗಿ ಕೇವಲ ವಿಧಾನಸೌಧದಲ್ಲಿ ಮಾತ್ರವಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲು ಬಿಜೆಪಿ ನಿರ್ಧಾರ ಮಾಡಿದೆ. ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ ಅಧಿವೇಶನ ಕೊನೆಯ ದಿನ

“21 ದಿನಗಳ ಕಾಲ ನಡೆದ ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ. ಅಧಿವೇಶನ ಆರಂಭದ ದಿನಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕೆಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿ ಉಂಟು ಮಾಡಿತ್ತು. ಇದೀಗ ಕೊನೆಯ ದಿನವೂ ಕಲಾಪ ಬಹಿಷ್ಕಾರ ಮಾಡಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...