ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ; ಕಾಂಗ್ರೆಸ್‌ ಶಾಸಕರೇ ಕಾರಣವೆಂದು ಬಿಜೆಪಿ ಆರೋಪ

Date:

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್‌ ಶಾಸಕರೇ ಕಾರಣವೆಂದು ಬಿಜೆಪಿ ಆರೋಪಿಸಿದೆ. ಆತನ ಸಾವನ್ನು ರಾಜಕೀಯಗೊಳಿಸಿದೆ. ಕೊಡಗಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆಯನ್ನು ಅರಿತಿರುವ ಪೊಲೀಸ್‌ ಇಲಾಖೆ, ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು‌ ಮೂಲದ ವಿನಯ್ ಸೋಮಯ್ಯ ಎಂದು ಗುರುತಿಸಲಾಗಿದೆ. ಆತ ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದಕ್ಕೆ ಅಡ್ಮಿನ್‌ ಆಗಿದ್ದರು. ಆ ಗುಂಪಿನಲ್ಲಿ ಕಳೆದ ಜನವರಿಯಲ್ಲಿ ಕೊಡಗು ಜಿಲ್ಲೆಯ ಶಾಸಕರೊಬ್ಬರ ಕುರಿತು ಅವಹೇಳನಕಾರಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು. ಅದೇ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ, ಆತ ಕೋರ್ಟ್‌ನಿಂದ ನಿರಪೇಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಇದೀಗ, ಬೆಂಗಳೂರಿನಲ್ಲಿ ಆತ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿಯೇ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ ಕೂಡ ಬರೆದಿಟ್ಟಿದ್ದಾರೆ.

ಡೆತ್‌ನೋಟ್‌ನಲ್ಲಿ, “ರಾಜಕೀಯ ಪ್ರೇರಿತವಾಗಿ ಪೊಲೀಸರು ತನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ. ನನ್ನ ಸಾವಿಗೆ ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ಕಾರಣ. ನನ್ನ ಮೇಲೆ ಎಫ್‌ಐಆರ್ ದಾಖಲಿಸಿ, ನನ್ನ ಫೋಟೋವನ್ನು ಕೊಡಗು ಜಿಲ್ಲೆಯಾದ್ಯಂತ ಹಂಚಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ. ಪ್ರತಿದಿನ ಜಿಗುಪ್ಸೆಯಾಗುತ್ತಿತ್ತು. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಬರೆದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಸುಪ್ರೀಂ ಕೋರ್ಟ್‌ ತೀರ್ಪು ಮತ್ತು ‘ಬುಲ್ಡೋಜರ್ ನ್ಯಾಯ’: ದಂಡನೆಯ ಹೆಸರಿನಲ್ಲಿ ದ್ವೇಷ ಸಾಧನೆ

ಆತನ ಸಾವಿನ ಬೆನ್ನಲ್ಲೇ, ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡಲಾರಂಭಿಸಿದೆ. ಮೃತ ವಿನಯ್‌ನನ್ನು ಬಿಜೆಪಿ ಕಾರ್ಯಕರ್ತನೆಂದು ಬಿಜೆಪಿಗರು ಹೇಳಿಕೊಳ್ಳುತ್ತಿದ್ದಾರೆ. “ಬೆಂಗಳೂರಿನಲ್ಲಿ ನೆಲೆಸಿದ್ದ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ತನ್ನೀರಾ ಮೈನಾ ಕಾರಣ. ಈ ಮೂವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ಬಿಜೆಪಿ ನಾಯಕ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದ್ದಾರೆ.

ಮೃತ ವಿನಯ್‌ನ ಮೃಹದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಬಳಿಕ, ಆತನ ಮೃತದೇಹವನ್ನು ಕೊಡಗು ಜಿಲ್ಲೆಯ ಆತನ ನಿವಾಸಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ, ಬಿಜೆಪಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ವರದಿಯಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...