ಉಡುಪಿ | ರಕ್ತದಾನದ ಮಹತ್ಕಾರ್ಯದಲ್ಲಿ ಯುವಕರು ಕೈಜೋಡಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ದಾನಗಳಲ್ಲೇ ಅತ್ಯಂತ ಶ್ರೇಷ್ಠ ದಾನ ರಕ್ತದಾನ. ಒಬ್ಬ ವ್ಯಕ್ತಿಯು ನೀಡುವ ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಕಾರ್ಯಗಳಲ್ಲಿ ಕೈಜೋಡಿಸಿ ಜನರ ಜೀವ ಉಳಿಸಲು
ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞ (ಸ್ವಾಯತ್ತ) ಕಾಲೇಜು, ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಪೂರ್ಣ ಪ್ರಜ್ಞ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ಪ್ರಜ್ಞ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2025 ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತ ಪ್ರಕರಣಗಳಾಗುತ್ತವೆ. ಜಿಲ್ಲೆಯಲ್ಲಿ ಸರಾಸರಿ 300 ರಿಂದ 600 ಅಪಘಾತ ಪ್ರಕರಣಗಳು ದಾಖಲಾಗುತ್ತವೆ. ಅಪಘಾತ ಸಂದರ್ಭಗಳಲ್ಲಿ ಅತಿ ಹೆಚ್ಚು ರಕ್ತಸ್ರಾವದಿಂದಾಗಿ ಸಾವು-ನೋವುಗಳಾಗುತ್ತವೆ. ಇಂತಹ ತುರ್ತು ಸಮಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಯುವಕರು ರಕ್ತದಾನ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ತುರ್ತು ಸಂದರ್ಭಗಳಲ್ಲಿ ಜೀವದಾನ ಮಾಡಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಿದ್ದು ಯುವಕರು ಇವರಿಂದ ಸ್ಪೂರ್ತಿ ಪಡೆದು ಸ್ವಯಂ ಪ್ರೇರಿತ ರಕ್ತದಾನ ಕಾರ್ಯಗಳಿಗೆ ಕೈಜೋಡಿಸಬೇಕು ಎಂದರು.

ಈ ಸಂದರ್ಭದಲ್ಲಿ 50ಕ್ಕಿಂತಲೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ, ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ನಿರ್ದೇಶಕ ಡಾ.ಪಿ.ಎಸ್. ಐತಾಳ್, ಕುಂದಾಪುರ ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ, ಉಡುಪಿ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರ್, ರೆಡ್ ಕ್ರಾಸ್ ಖಜಾಂಜಿ ರಮಾದೇವಿ ಪೂರ್ಣ ಪ್ರಜ್ಞ ಕಾಲೇಜಿನ ಐಕ್ಯೂಎಸಿ ಸಂಯೋಜಕ ವಿನಯ್ ಕುಮಾರ್.ಡಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...