ಬ್ರೇಕಿಂಗ್ ನ್ಯೂಸ್ | ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್‌ಗೆ ಬಾಂಬ್ ಬೆದರಿಕೆ

Date:

ಬೆಂಗಳೂರು ನಗರದ ತಾಜ್ ವೆಸ್ಟ್ ಎಂಡ್‌ ಐಷಾರಾಮಿ ಹೋಟೆಲ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಇದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಶನಿವಾರ ಬೆಳಿಗ್ಗೆ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಸಂದೇಶವನ್ನು ಐಷಾರಾಮಿ ಹೋಟೆಲ್‌ನ ಇಮೇಲ್ ವಿಳಾಸಕ್ಕೆ ಇಮೇಲ್ ಕಳುಹಿಸಲಾಗಿದೆ.

ಇದನ್ನು ಓದಿದ್ದೀರಾ? ಹರಿಯಾಣ | ಗುರುಗ್ರಾಮದ ಎಲ್ಲಾ ಮಾಲ್‌ಗಳಿಗೆ ಬಾಂಬ್ ಬೆದರಿಕೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್‌ ಆಗಿದ್ದು, ಪ್ರಮುಖ ರಾಜಕೀಯ ನಾಯಕರು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳು ಇಲ್ಲಿಗೆ ಆಗಾಗ್ಗೆ ಬರುತ್ತಾರೆ.

ಬಾಂಬ್ ಬೆದರಿಕೆ ಬಗ್ಗೆ ಸಿಬ್ಬಂದಿಗಳು ತಮ್ಮ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದು ಬಳಿಕ ಪೊಲೀಸರಿಗೆ ತಿಳಿಸಲಾಗಿದೆ. ಕೂಡಲೇ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ತಂಡವು ಸ್ಥಳಕ್ಕೆ ಧಾವಿಸಿದೆ. ಬಾಂಬ್ ಸ್ಕ್ವಾಡ್ ಕೂಡಾ ಸ್ಥಳಕ್ಕೆ ಆಗಮಿಸಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಪೊಲೀಸ್ ಆಯುಕ್ತ (ಕೇಂದ್ರ) ಶೇಖರ್ ಎಚ್ ತೆಕ್ಕಣ್ಣವರ್, “ಇಂದು ಬೆಳಗ್ಗೆ ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದಾಗಿ ಕರೆ ಬಂದಿದೆ. ನಮ್ಮ ಬಿಡಿಡಿಎಸ್ ಮತ್ತು ಎಎಸ್‌ಸಿ ತಂಡವು ಆವರಣವನ್ನು ಪರಿಶೀಲಿಸಿದಾಗ ಅದು ಹುಸಿ ಬೆದರಿಕೆ ಇಮೇಲ್ ಎಂಬುದು ತಿಳಿದುಬಂದಿದೆ. ನಾವು ದೂರು ದಾಖಲಿಸಿಕೊಂಡು, ತನಿಖೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...