ಬೊಮ್ಮಾಯಿ ಸಲಹೆ ಸುಪ್ರೀಂ ಕೋರ್ಟಿನಲ್ಲಿ ಇಕ್ಕಟ್ಟಿಗೆ ಸಿಲುಕಿಸುವಂತಹದ್ದು: ಡಿಕೆ ಶಿವಕುಮಾರ್

Date:

  • ರಾಜಕಾರಣ ಬದಿಗಿಟ್ಟು, ಪ್ರಧಾನಿಗಳ ಮಧ್ಯಸ್ತಿಕೆ‍ಗೆ ಬಿಜೆಪಿ ಮುಂದಾಗಲಿ’
  • ಕೇಂದ್ರ ಸರ್ಕಾರದ ಮೇಲೆ ನಾವೂ ಒತ್ತಡ ಹೇರುತ್ತೇವೆ’

ಮಾಜಿ ಸಿಎಂ ಬೊಮ್ಮಾಯಿ ಅವರು ಕಾವೇರಿ ನೀರು ವಿಚಾರವಾಗಿ ನೀಡಿರುವ ಸಲಹೆ ನಮ್ಮನ್ನು ಸುಪ್ರೀಂ ಕೋರ್ಟಿನಲ್ಲಿ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವಂತಹದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬೊಮ್ಮಾಯಿ ಹೇಳಿದ್ದಾರೆ. ಆದರೆ, ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ” ಎಂದು ಪ್ರಶ್ನಿಸಿದರು.

“ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟ್ ಅನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ” ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಡಬ್ಲ್ಯೂಎಂಎ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್

ರಾಜಕಾರಣ ಬದಿಗಿಡಲಿ

“ರಾಜಕಾರಣ ಬದಿಗಿಟ್ಟು, ಕೂಡಲೇ ಪ್ರಧಾನಿಗಳಿಗೆ ಮಧ್ಯಸ್ಥಿಕೆ ವಹಿಸುವಂತೆ ಬೊಮ್ಮಾಯಿ ಅವರು ಆಗ್ರಹಿಸಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತದ ಬಗ್ಗೆ ಬಿಜೆಪಿಯವರು ಧ್ವನಿ ಎತ್ತಲಿ. ದೆಹಲಿಗೆ ಹೋಗಿ, ಸಂಸದರನ್ನು ಭೇಟಿ ಮಾಡಿ ಮನವಿ ಮಾಡುವೆ. ಮಧ್ಯಸ್ಥಿಕೆ ವಹಿಸಲು ಸರ್ಕಾರದಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ “ಎಂದು ತಿಳಿಸಿದರು.

ದೇವೇಗೌಡರ ಸಲಹೆ ಸರಿ ಇದೆ

“ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ ಎಚ್ ಡಿ ದೇವೇಗೌಡರು ‘ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ’ ಎಂದು ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಅವರು ಮಾತನಾಡಿದ್ದಾರೆ. ಅವರ ಸಲಹೆ ಸ್ವಾಗತಾರ್ಹ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...