ಪ್ರಿಯಾಂಕ್‌ ಖರ್ಗೆ ಮತ್ತು ನನ್ನ ನಡುವೆ ಮನಸ್ತಾಪ ಮೂಡಿಸಲು ನಕಲಿ ಪತ್ರ ಸೃಷ್ಟಿ: ಬಿ ಆರ್‌ ಪಾಟೀಲ್

Date:

  • ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿಬಿಟ್ಟಿದ್ದಾರೆ
  • ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಪತ್ರ ಬರೆಯಲಾಗಿತ್ತು’

ಶಾಸಕ ಬಿ ಆರ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್‌, “ಶಾಸಕರ ಕುಂದುಕೊರತೆ ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದೆ.

“ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ. ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ. ಶಾಸಕ ಬಿ ಆರ್ ಪಾಟೀಲ್ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್‌ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ ಮಾಡುತ್ತೇವೆ ಎಂದುಕೊಂಡಿದ್ದರೆ ಅದು ಮೂರ್ಖತನವಾಗುತ್ತದೆ ” ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಕಿಡಿ ಕಾರಿದೆ.

ಈ ಬಗ್ಗೆ ಸ್ವತಃ ಶಾಸಕ ಬಿ ಆರ್‌ ಪಾಟೀಲ್‌ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನನ್ನದಲ್ಲ. ಇದೊಂದು ಫೇಕ್‌ ಲೆಟರ್‌. ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ ಕುತಂತ್ರದಿಂದ ಸುಳ್ಳುಗಳನ್ನು ಹೆಣೆಯಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

“ನಾನು ಕೊಟ್ಟ ಪತ್ರಕ್ಕೂ ಈ ಪತ್ರದಲ್ಲಿರುವ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ. ಈ ನಕಲಿ ಪತ್ರದಲ್ಲಿ ನನ್ನ ಸಹಿಯನ್ನು ಫೋಟೋ ಶಾಪ್ ಮೂಲಕ ಅಂಟಿಸಲಾಗಿದೆ. ಅಲ್ಲದೇ ಈ ಫೇಕ್ ಲೆಟರ್‌ನಲ್ಲಿ ನನ್ನ ಹಳೆಯ ಮನೆಯ ವಿಳಾಸ ಬರೆಯಲಾಗಿದೆ. ಪತ್ರವನ್ನು ಡಿಜಿಟಲ್‌ನಲ್ಲಿ ಟೈಪ್ ಮಾಡಿ, ಸಹಿಗೆ ಜೆರಾಕ್ಸ್‌ನಿಂದ ಸ್ಕ್ಯಾನ್ ಮಾಡಿ ಬಳಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರಿಯಾಂಕ್‌ ಖರ್ಗೆ ಮತ್ತು ನನ್ನ ನಡುವೆ ಮನಸ್ತಾಪ ಮೂಡಿಸಲು ಈ ನಕಲಿ ಪತ್ರ ಸೃಷ್ಟಿಸಲಾಗಿದೆ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಿದ್ದೇನೆ” ಎಂದು ಬಿ ಆರ್ ಪಾಟೀಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...