ಮಂಡ್ಯ | ‘ಬ್ರಹ್ಮಕುಮಾರಿ ವಿವಿ’ಯು ಆಧ್ಯಾತ್ಮಿಕತೆಯ ಮಾರ್ಗ: ಶಾಸಕ ಎಚ್‌.ಟಿ. ಮಂಜು

Date:

ಕೆ.ಆರ್.ಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವರ್ತಮಾನದಲ್ಲಿ ಜಾತಿ, ಬೇಧಗಳಿಂದ ಮುಕ್ತರಾಗಿ, ಉನ್ನತ ಜೀವನವನ್ನು ನಡೆಸುವ ಆಧ್ಯಾತ್ಮಿಕತೆಯ ಮಾರ್ಗವನ್ನು ಕಲಿಸುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರಲ್ಲಿರುವ ಮೌಲ್ಯಗಳು ಮರೆಯಾದಂತೆ ಭೂಮಂಡಲದಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಆದ್ದರಿಂದ, ಮೌಲ್ಯಗಳ ಉಳಿವಿಗಾಗಿ ಶಾಂತಿಯನ್ನು ಸ್ಥಾಪಿಸಲು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್‌.ಟಿ ಮಂಜು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಯೋಜಿಸಿದ್ದ ತನ್ನ ನೂತನ ಸೇವಕೇಂದ್ರ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವರ್ತಮಾನದಲ್ಲಿ ಸುಖ, ಶಾಂತಿ, ನೆಮ್ಮದಿಯ ಜೀವನ ನಡೆಸಲು ರಾಜಯೋಗವನ್ನು ಅಭ್ಯಾಸಿಸಿದಾಗ ನಾವು ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ. ಪರಮಾತ್ಮನ ರಕ್ಷಣೆಯ ಕವಚದ ಅನುಭೂತಿಯಾಗುತ್ತದೆ. ಇಲ್ಲಿ ನೀಡಲಾಗುವ ರಾಜಯೋಗ ಶಿಕ್ಷಣವನ್ನ ಪಡೆದು, ತಮ್ಮ ಬದುಕಿನಲ್ಲಿ ಆಧ್ಯಾತ್ಮಿಕತೆಯ ಅನುಭೂತಿಯನ್ನು ಮಾಡಿಕೊಳ್ಳಬೇಕು” ಎಂದು ಶಾಸಕರು ಕರೆ ನೀಡಿದರು.

ಅಕ್ಕಿಹೆಬ್ಬಾಳು ರಘು ಮಾತನಾಡಿ, “ವಿಶ್ವವಿದ್ಯಾಲಯು ಹಲವು ವರ್ಷಗಳಿಂದ ಜಾತಿ, ಧರ್ಮ, ಭೇದವಿಲ್ಲದೆ ಸರ್ವರನ್ನು ಸಮಾನವಾಗಿ ಕಂಡು, ವಿಶ್ವಕ್ಕೆ ಶಾಂತಿಯ ಸಂದೇಶ ಸಾರುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಸಮಾಜದ ಒಳಿತಿಗಾಗಿ, ಸರ್ವರ ಹಿತವನ್ನೇ ಬಯಸುವ ಕೆಲಸ ಮಾಡುತ್ತಿದ್ದಾರೆ. ದೇಶ, ವಿದೇಶಗಳಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ತುಂಬುವ ಮೂಲಕ ಶಾಂತಿಯುತ ಸಮಾಜ ನಿರ್ಮಾಣಕ್ಕೆ ಪರೋಕ್ಷವಾಗಿ ನೆರವಾಗುತ್ತಿದ್ದಾರೆ. ಸರ್ವರ ಕಲ್ಯಾಣವನ್ನು ಬಯಸುವ ಪ್ರಜಾಪಿತ ಬ್ರಹ್ಮಾಕುಮಾರಿ ವಿಶ್ವವಿದ್ಯಾಲಯ, ಸಮಾಜಮುಖಿ ಕಾರ್ಯಕ್ಕೆ ವಿಶ್ವಸಂಸ್ಥೆಯಿಂದ ಏಳು ಶಾಂತಿ ಪ್ರಶಸ್ತಿ ಲಭಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೈಸೂರು ಉಪವಲಯ ಮುಖ್ಯ ಸಂಚಾಲಕ ರಾಜಯೋಗಿನಿ ಬ್ರಹ್ಮಕುಮಾರಿ ಲಕ್ಷ್ಮಿ ಜಿ ಮಾತನಾಡಿ, “ಸಮಾಜದ ಪ್ರತಿಯೊಬ್ಬರೂ ಉಲ್ಲಾಸದಿಂದ ಈ ಲೋಕದಲ್ಲಿ ಬದುಕಿ ಬಾಳಬೇಕು. ನಮ್ಮ ಮಾತುಗಳು ಇನ್ನೊಬ್ಬರನ್ನು ಸಂತೋಷದ ಕಡೆಗೆ ಕೊಂಡೊಯ್ಯಬೇಕು ಎಂದು ಆಶೀರ್ವಚನ” ನೀಡಿದರು.

ಕಾರ್ಯಕ್ರಮದಲ್ಲಿ, ಪ್ರಾಂಶುಪಾಲ ಬಾಲಕೃಷ್ಣ, ಶಾರದ, ಸೇವಾ ಕೇಂದ್ರ ಪ್ರತಿನಿಧಿ ರಾಮಚಂದ್ರು, ಮೋಹನ್, ರಾಧಮ್ಮ, ಬಿ. ಕೆ ಪ್ರಾಣೇಶ್, ಬಿ.ಕೆ. ಶಿವಲೀಲಾ, ಸವಿತಾ, ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕ ಬಲದೇವ್, ವಾಸು, ಎ.ಜೆ. ಶಂಕರ್, ರಂಗನಾಥನ್, ಜಯಂತಿ, ರಾಮಚಂದ್ರ ರಾವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...