ಉಡುಪಿ | ಬ್ರಹ್ಮಾವರದಲ್ಲಿ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

Date:

ವೇಗವಾಗಿ ಬಂದ ಕಾರೊಂದು ಡಿಕ್ಕಿ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್‌. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಯ ಮಾಹಿತಿ ತಿಳಿದು ಆಸ್ಪತ್ರೆಯ ಬಳಿ ಬೃಹತ್‌ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...