ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ: ಕೆ.ಎನ್ ರಾಜಣ್ಣ

Date:

ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿಯೋ-ತಪ್ಪೋ ಎಂಬುದನ್ನು ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕು. ಆದರೆ, ಹವನ ಮಾಡಿಸುವವರು ನಾವೇ, ಕಾಣಿಕೆ ಕೊಡುವುದೂ ನಾವೇ, ಹೀಗಿದ್ದಾಗ ನಾವೇಕೆ ಕೆಳವರ್ಗವೆಂದು ಹೇಳಿಕೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಚರಕ ಚಾರಿಟೆಬಲ್ ಟ್ರಸ್ಟ್ ಆಯೋಜಿಸಿದ್ದ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು. “ದನಿ ಇಲ್ಲದವರು ಮತ್ತು ಶೋಷಿತ ಸಮುದಾಯ ಇರುತ್ತದೆ. ಆದರೆ, ಅವರಾರೂ ಇನ್ನೊಬ್ಬರಿಗೆ ಮೋಸ, ಅನ್ಯಾಯ ಮಾಡುವ ಹಾಗೂ ಸುಳ್ಳು ಹೇಳುವ ಕೆಲಸ ಮಾಡುವುದಿಲ್ಲ. ನಾವು ಬೇರೆಯವರಿಗಿಂತ ಬುದ್ದಿವಂತರಿದ್ದೇವೆ. ನಮ್ಮನ್ನು ನಾವೇ ಯಾಕೆ ಕೆಳವರ್ಗವೆಂದು ಹೇಳಿಕೊಳ್ಳಬೇಕು. ಈ ವಿಚಾರವನ್ನು ನಾನು ಒಪ್ಪುವುದಿಲ್ಲ. ನಾವು ಕೆಳವರ್ಗ ಮತ್ತು ಮೇಲ್ವರ್ಗ ಅಂತ ಹೇಳಿಕೊಳ್ಳುವುದರ ಬದಲು ಹಿಂದುಳಿದವರು ಮತ್ತು ಮುಂದುವರೆದವರು ಅಂತ ಹೇಳಬಹುದು” ಎಂದು ಹೇಳಿದ್ದಾರೆ.

“ವಾಸ್ತವ ಸತ್ಯವನ್ನು ಜನರಿಗೆ ಅರ್ಥ ಮಾಡಿಸಬೇಕು. ವಾಸ್ತವದ ಸತ್ಯ ಸಂಗತಿಗಳನ್ನು ನಿರ್ಭೀತಿಯಿಂದ ಹೇಳಿ ಜನರಲ್ಲಿ ಅರಿವು ಮೂಡಿಸಬೇಕು. ಸತ್ಯ ಹೇಳುವುದನ್ನು ಎಲ್ಲ ಯುವಜನರು ಕಲಿಯಬೇಕು. ಇತಿಹಾಸ ಅರಿಯದೆ ಇತಿಹಾಸ ನಿರ್ಮಾಣ ಸಾಧ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕು. ನಮ್ಮ ಮೇಲೆ ಯಾರಾದರೂ ದಬ್ಬಾಳಿಕೆ, ದೌರ್ಜನ್ಯ ನಡೆಸುವ ಸಂದರ್ಭಗಳು ಬಂದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು. ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದು ಬೇಡ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...