ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಬೆಲ್ಟ್ ಮತ್ತು ಬ್ಯಾಟ್‌ಗಳಿಂದ ಹೊಡೆದಾಡಿಕೊಂಡಿದ್ದು, ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ತಳಸೆಂದ ಬಳಿಯ ಖಾಸಗಿ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ನಡೆದಿದೆ. ಎರಡು ವಿದ್ಯಾರ್ಥಿ ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸುಮಾರು 15 ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್ ಹೆಸರನಲ್ಲಿ ಜೂನಿಯರ್‌ಗಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಸನಿ ಮೊಹೊತೆ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಸತಿ ನಿಲಯದಲ್ಲಿ ಶಿಸ್ತು ಕಾಪಾಡಲು ವಿಫಲವಾದ ಹಿನ್ನೆಲೆ ಹಾಸ್ಟೇಲ್ ವಾರ್ಡನ್ ವಿರುದ್ಧ ಕೇಸ್ ದಾಖಲಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೊಲ್ಹಾಪುರ ಜಿಲ್ಲಾಡಳಿತ ತನಿಖೆ ನಡೆಸಲು ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಶಾಲಾ ಆಡಳಿತದಿಂದ ವರದಿ ಕೋರಲಾಗಿದೆ.
ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಂವಿಧಾನ ಬದಲಿಸುವ ಸನಾತನಿಗಳ ಹುನ್ನಾರಕ್ಕೆ ವಕೀಲರೇ ದಾಳ
ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ದೃಶ್ಯಗಳು ವೈರಲ್ ಆಗಿರುವ ಹಿನ್ನೆಲೆ, ಪೋಷಕರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ವಸತಿ ನಿಲಯಗಳ ಮೇಲಿನ ಮೇಲ್ವಿಚಾರಣೆ ಮತ್ತು ವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಎದ್ದಿವೆ.





