ಭಾಲ್ಕಿ | ಲಂಚ ಸ್ವೀಕಾರ : ಪಿಡಿಒ, ತಾಂತ್ರಿಕ ಸಹಾಯಕ ಲೋಕಾಯುಕ್ತ ಬಲೆಗೆ

Date:

ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್‌ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟು, ನಗದು ಲಂಚ ಸ್ವೀಕರಿಸುತ್ತಿದ್ದ ಭಾಲ್ಕಿ ತಾಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಂತ್ರಿಕ ಸಹಾಯಕ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪಿಡಿಒ ರಾಹುಲ್‌ ದಾಂಡೆ ದೂರದಾರರಿಂದ 30 ಸಾವಿರ ಹಾಗೂ ತಾಂತ್ರಿಕ ಸಹಾಯಕ ಸಿದ್ದರಾಮೇಶ್ವರ ಪಾಟೀಲ್‌ 70 ಸಾವಿರ ರೂಪಾಯಿ ನಗದು ಪಡೆಯುತ್ತಿದ್ದ ವೇಳೆ ಎರಡು ಕಡೆ ಪ್ರತ್ಯೇಕವಾಗಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಿಲ್‌ ಪಾವತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಗ್ಗೆ ಗುತ್ತಿಗೆದಾರ ಅರವಿಂದ ಭಾಲ್ಕೆ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಇಬ್ಬರು ಅಧಿಕಾರಿಗಳಿಗೆ ಖೇಡ್ಡಾಗೆ ಬಿಳಿಸಲು ಯೋಜನೆ ರೂಪಿಸಿದ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೌಬಾದ್‌ನ ಆಟೋ ನಗರ ಬಸ್ ನಿಲ್ದಾಣ ಬಳಿ ಪಿಡಿಒ, ಭಾಲ್ಕಿ ತಾಲೂಕಿನ ಹಲಬರ್ಗಾ ಬಸ್‌ ನಿಲ್ದಾಣ ಬಳಿ ತಾಂತ್ರಿಕ ಸಹಾಯಕ ದೂರದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾವ್ ನೇತೃತ್ವದಲ್ಲಿ ಎರಡು ತಂಡಗಳಾಗಿ ಪ್ರತ್ಯೇಕ ದಾಳಿ ನಡೆಸಲಾಗಿದೆ. ಪಿಎಸ್‌ಐಗಳಾದ ಬಾಬಾಸಾಹೇಬ್ ಪಾಟೀಲ್, ಸಂತೋಷ ರಾಠೋಡ, ಅರ್ಜುನಪ್ಪ, ಉದ್ದಂಡಪ್ಪ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...