ಮಂಗಳೂರು | ತಾಯಿಯ ಎದುರಲ್ಲೇ ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿಯ ಅಟ್ಟಾಡಿಸಿ ಹತ್ಯೆ

Date:

ಮಂಗಳೂರಿನ ರೌಡಿಯಾಗಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ತಾಯಿಯ ಎದುರಲ್ಲೇ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮಂಗಳೂರಿನ ಉಳ್ಳಾಲ ಕಡಪ್ಪರ ನಿವಾಸಿ ಸಮೀರ್ (35) ಹತ್ಯೆಯಾದವ. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಅಪಾಯವನ್ನು ಅರಿತ ಸಮೀರ್​ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್​ನಿಂದ 500 ಮೀಟರ್​ ದೂರದಲ್ಲಿರುವ ವಿ.ಕೆ. ಫರ್ನಿಚರ್​ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2018ರಲ್ಲಿ ರೌಡಿಶೀಟರ್ ಟಾರ್ಗೆಟ್​ ಇಲ್ಯಾಸ್​ ಎಂಬಾತನನ್ನು ಜೆಪ್ಪುವಿನ ಫ್ಲ್ಯಾಟ್‍ವೊಂದರಲ್ಲಿ ದಾವೂದ್, ಸಮೀರ್, ರಿಯಾಝ್, ನಮೀರ್​, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್​ ಆಲಿ ಎಂಬವರು ಸೇರಿಕೊಂಡು ಕೊಲೆ ಮಾಡಿದ್ದರು.

ಟಾಗೆಟ್

ಪ್ರಕರಣದಲ್ಲಿ ಸಮೀರ್ ಎರಡನೇ ಆರೋಪಿಯಾಗಿದ್ದು, ದಾವೂದ್​ ಮತ್ತು ಸಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್‌ನನ್ನು ಆತನ ಕುಟುಂಬದ ಎದುರಲ್ಲೇ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾಗಿದ್ದ ಎ2 ಆರೋಪಿ ಸಮೀರ್, ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ. ಅವಕಾಶಕ್ಕಾಗಿ ಕಾಯುತ್ತಿದ್ದ ಟಾರ್ಗೆಟ್ ಇಲ್ಯಾಸ್ ತಂಡ, ಬಿಡುಗಡೆಯಾದ ಬೆನ್ನಲ್ಲೇ ಕೊಲೆ ನಡೆಸಿದೆ.

ಕೊಲೆಯಾದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...