ಬೀದರ್‌ | ವಾರದೊಳಗೆ ಮನರೇಗಾ ಕೂಲಿ ಹಣ ಪಾವತಿಸಲು ಬಿಎಸ್‌ಪಿ ಆಗ್ರಹ

Date:

ಬಸವಕಲ್ಯಾಣ ತಾಲೂಕಿನಲ್ಲಿ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಕೂಲಿ ಹಣ ಹಾಗೂ ಬಾಕಿ ಉಳಿದ ಸಾಮಗ್ರಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಬಹುಜನ ಸಮಾಜ ಪಕ್ಷ ತಾಲೂಕು ಘಟಕ ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಪಂಚಾಯಿತಿ ಇಒ ಮಹಾದೇವ ಬಾಬಳಗಿ ಅವರಿಗೆ ಸಲ್ಲಿಸಿದರು.

“ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಿ ಎರಡು ತಿಂಗಳು ಕಳೆದರೂ ಹಣ ನೀಡಿಲ್ಲ ಹಾಗೂ ಎರಡು ವರ್ಷದಿಂದ ಸಾಮಗ್ರಿ ಬಿಲ್ ಸಹ ನೀಡಿಲ್ಲ. ಆದರೆ, ಬೀದರ ಹಾಗೂ ಭಾಲ್ಕಿ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದಂತೆ ಮನರೇಗಾ ಕೂಲಿ ಹಣ ಹಾಗೂ ಸಾಮಗ್ರಿ ಬಿಲ್ ಪಾವತಿಸಿದ್ದಾರೆ. ಇನ್ನು ಮುಂದೆ ವಿಳಂಬ ಮಾಡದೆ ತಾಲೂಕಿನ ಮನರೇಗಾ ಬಾಕಿ ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಮನರೇಗಾ ದಿನಗೂಲಿ ಕಾರ್ಮಿಕರಿಗೆ ಎಮ್‌ಐಎಸ್ ಆದ ವಾರದೊಳಗೆ ಹಣ ಜಮೆ ಆಗುತ್ತಿತ್ತು. ಆದರೆ ಹೊಸ ಸರ್ಕಾರ ಬಂದ ನಂತರ ಎರಡು ತಿಂಗಳಾದರೂ ಕೂಲಿ ಹಣ ಖಾತೆಗೆ ಜಮೆ ಆಗುತ್ತಿಲ್ಲ. ಇದರಿಂದ ದಿನಗೂಲಿ ಕಾರ್ಮಿಕರು ಹಾಗೂ ಸಾಮಗ್ರಿ ನೀಡಿದ ಏಜೆನ್ಸಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಒಂದು ವಾರದೊಳಗೆ ನರೇಗಾ ಯೋಜನೆಯ ಕಾರ್ಮಿಕರ ಬಾಕಿ ಬಿಲ್ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ತಾಲ್ಲೂಕು ಪಂಚಾಯಿತಿ ಕಛೇರಿ ಮುಂಭಾಗ ಧರಣಿ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

ಈ ಸಂದರ್ಭದಲ್ಲಿ ಬಿಎಸ್ಪಿಯ ತಾಲೂಕಾಧ್ಯಕ್ಷ ಶಂಕರ ಫುಲೆ, ಕಾರ್ಯದರ್ಶಿ ಮಾಹಾದೇವ ಗಾಯಕವಾಡ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್‌, ತಾಲ್ಲೂಕು ಉಪಾಧ್ಯಕ್ಷ ಸಚಿನ ಕಾಂಬಳೆ ಹಾಗೂ ಶಿವರಾಜ ಕಾಂಬಳೆ, ಅಶೋಕ ಶಿಂಧೆ, ದಿಲೀಪ ಕಾಂಬಳೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...