ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ನೀಡಲು ಮತ್ತೆ ಟೆಂಡರ್ : ಸಚಿವ ಶಿವಾನಂದ ಪಾಟೀಲ

Date:

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ ನೆರವು ಲಭ್ಯವಾಗದಿದ್ದರೆ ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ(ಬಿ) ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಲ್‌ಆರ್‌ಓಟಿ ಆಧಾರದ ಮೇಲೆ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಮತ್ತೊಮ್ಮೆ ಟೆಂಡರ್ ಕರೆಯಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಎಂಎಲ್ಸಿ ಭೀಮರಾವ್ ಬಸವರಾಜ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ʼಬಿಎಸ್‌ಎಸ್‌ಕೆ ಸೇರಿದಂತೆ ರಾಜ್ಯದ ಒಟ್ಟು ಆರು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್ ಸಿಡಿಸಿ ನೆರವು ಪಡೆಯಲು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ಮಾಡಲಾಗುವುದು. ಎನ್‌ಸಿಡಿಸಿ ನೆರವು ಲಭ್ಯವಾಗದಿದ್ದರೆ ಖಾಸಗಿಯವರಿಗೆ ಗುತ್ತಿಗೆ ನೀಡಲು ಮತ್ತೆ ಟೆಂಡರ್ ಕರೆಯಲಾಗುವುದುʼ ಎಂದು ಉತ್ತರಿಸಿದರು.

ʼಆರ್ಥಿಕ ಸಂಕಷ್ಟ ಮತ್ತು ಇತರ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರ ಸಕ್ಕರೆ ಕಾರ್ಖಾನೆಗಳನ್ನು ಕಬ್ಬು ಬೆಳೆಗಾರರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡುವ ಮೂಲಕ ಪುನಶ್ಚೇತನಗೊಳಿಸುವುದು ಸರಕಾರದ ಪ್ರಸ್ತುತ ನೀತಿಯಾಗಿದೆ. ಈಗಾಗಲೇ ಒಟ್ಟು ಹತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಿ ಪುನಶ್ಚೇತನಗೊಳಿಸಲಾಗಿದೆʼ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಸ್ ಎಸ್ ಕೆ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2022-23ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ಎಲ್‌ಆರ್‌ಓಟಿ ಆಧಾರದ ಮೇಲೆ ಖಾಸಗಿಯವರಿಗೆ ಗುತ್ತಿಗೆ ನೀಡಲು ಟೆಂಡರ್ ಕರೆಯಲಾಗಿತ್ತು. ಫ್ರಿ ಬಿಡ್ ಸಭೆಯಲ್ಲಿ ಬಿಡ್ಡುದಾರರು ಭಾಗವಹಿಸಿದ್ದರೂ ನಿಗದಿಪಡಿಸಿದ ಅವಧಿಯಲ್ಲಿ ಒಬ್ಬರೂ ಭರ್ತಿಮಾಡಿದ ಅರ್ಜಿ ಸಲ್ಲಿಸಲಿಲ್ಲ. ಎರಡನೇ ಬಾರಿ ಟೆಂಡರ್ ಕರೆದಾಗ ಸರ್ಕಾರದ ಷರತ್ತುಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಯಾವ ಬಿಡ್ಡುದಾರರೂ ಭಾಗವಹಿಸಲಿಲ್ಲ. ಹೀಗಾಗಿ ಬಿಡ್ಡುದಾರರು ಸರ್ಕಾರದ ಷರತ್ತುಗಳ ಸಡಿಲಿಕೆ ಕೋರಿ ಸಲ್ಲಿಸಿರುವ ಮನವಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಬ್ಬು ಅಭಿವೃದ್ಧಿ ಆಯುಕ್ತರು 2023ರ ಮಾರ್ಚ್ 16ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು ಏಕ ಕಾಲ ತೀರುವಳಿ ಯೋಜನೆಯಲ್ಲಿ ಎಷ್ಟು ಮೊತ್ತಕ್ಕೆ ಒಪ್ಪಲಿವೆ ಎಂಬ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಕಾರ್ಖಾನೆಗೆ ಸೂಚನೆ ನೀಡಲಾಗಿತ್ತು ಎಂದು ಸಚಿವರು ತಿಳಿಸಿದರು.


ಏಕ ತೀರುವಳಿ ಯೋಜನೆಯಲ್ಲಿ ಬಡ್ಡಿ ಮನ್ನಾ ಮಾಡುವ ಪ್ರಸ್ತಾವನೆಗೆ ಬ್ಯಾಂಕುಗಳಿAದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ ಸರ್ಕಾರದ ಹಂತದಲ್ಲಿಯೇ ಬಡ್ಡಿ ಮನ್ನಾ ಮಾಡಬೇಕು ಹಾಗೂ ಲೀಸ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಖಾನೆ ಪುನರಾರಂಭ ಮಾಡಬೇಕು ಎಂದು ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರಕ್ಕೆ ಮನವಿ ಮಾಡಿತ್ತು.

ʼಈ ನಡುವೆ ಕಾರ್ಖಾನೆಗೆ ಪಡೆದಿದ್ದ ಸಾಲ ಸುಸ್ತಿಯಾಗಿದ್ದರಿಂದ ಜಿಲ್ಲಾಧಿಕಾರಿ ಅನುಮತಿ ಮೇರೆಗೆ ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಕಾರ್ಖಾನೆಯ ಚರ ಮತ್ತು ಸ್ಥಿರ ಆಸ್ತಿಯನ್ನು ಬಹಿರಂಗ ಹರಾಜು ಪ್ರಕ್ರಿಯೆ ಕೈಗೊಂಡಿದ್ದು, 184 ಕೋಟಿ ರೂ.ಗಳಿಗೆ ಸುಭಾಷ್ ಗಂಗಾ ಹುಮನಾಬಾದ್ ಅವರಿಗೆ ನೀಡಲಾಗಿತ್ತುʼ ಎಂದು ಹೇಳಿದರು.

ʼಸರ್ಕಾರದ ಅನುಮತಿ ಪಡೆಯದರೆ ಹರಾಜು ಮಾಡಲು ಅನುಮತಿ ನೀಡಿದ್ದಾರೆ ಎಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಜಿಲ್ಲಾಧಿಕಾರಿ ವಿರುದ್ಧ ಸರ್ಕಾರಕ್ಕೆ ದೂರು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಬೆಳಗಾವಿಯಲ್ಲೇ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಮ್ಮುಖದಲ್ಲಿ ಸಭೆ ನಡೆಸಿ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತುʼ ಎಂದು ವಿವರಿಸಿದರು.

ಇದನ್ನೂ ಓದಿ : ಬೀದರ್‌ | ಡಿ.18ರೊಳಗೆ ಕ್ರಿಯಾ ಯೋಜನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ʼಕಾರ್ಖಾನೆ ಪುನರಾರಂಭಕ್ಕೆ ಕಳೆದ ಜೂನ್ 26ರಂದು ಬೆಂಗಳೂರಿನಲ್ಲಿ ಸಭೆ ನಡೆಸಿದ ಸಂದರ್ಭದಲ್ಲಿ ಸರ್ಕಾರದಿಂದ ಆರ್ಥಿಕ ನೆರವು ಪಡೆಯಬೇಕು ಎಂಬ ಅಭಿಪ್ರಾಯಕ್ಕೆ ಬರಲಾಗಿತ್ತು. ಹಾಗೂ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಮತ್ತು ಸಹ ವಿದ್ಯುತ್ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಮೂಲಕ 550 ಕೋಟಿ ರೂ. ಆರ್ಥಿಕ ನೆರವು ಕೋಡಿ ಎನ್ ಸಿ ಡಿಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನೇರ ಹಣಕಾಸು ಮಾನದಂಡಗಳನ್ನು ಪೂರೈಸದ ಕಾರಣ ರಾಜ್ಯ ಸರ್ಕಾರವೇ ಪ್ರಾಥಮಿಕ ಸಾಲಗಾರನಾಗಿ ಶಿಫಾರಸ್ಸು ಮಾಡಬಹುದು ಎಂದು ಎನ್ ಸಿಡಿಸಿ ತಿಳಿಸಿತ್ತುʼ ಎಂದು ಸಚಿವರು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...