ಬಜೆಟ್‌ 23-24 | 2 ಗಂಟೆ 49 ನಿಮಿಷ ಆಯವ್ಯಯ ಓದಿದ ಸಿಎಂ ಸಿದ್ದರಾಮಯ್ಯ

Date:

  • 14ನೇ ಆಯವ್ಯಯ ಮಂಡಿಸುವ ಮೂಲಕ ಚರಿತ್ರಾರ್ಹ ದಾಖಲೆ ನಿರ್ಮಿಸಿದ ಸಿಎಂ
  • ಒಟ್ಟು 3,27,747 ಕೋಟಿ ರೂ. ವೆಚ್ಚದ ಬಜೆಟ್‌ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ

2018ರ ಫೆಬ್ರವರಿಯಲ್ಲಿ 13ನೇ ಆಯವ್ಯಯ ಮಂಡಿಸಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ದಾಖಲೆ ಸರಿಗಟ್ಟಿದ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ (ಜು.7) 14ನೇ ಆಯವ್ಯಯ ಮಂಡಿಸುವ ಮೂಲಕ ಚರಿತ್ರಾರ್ಹ ದಾಖಲೆ ನಿರ್ಮಿಸಿದರು.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯ ಅಧಿವೇಶನದಲ್ಲಿ 12.7ಕ್ಕೆ ಮಂಡಿಸಲು ಆರಂಭಿಸಿ, 128 ಪುಟಗಳ ಆಯವ್ಯಯವನ್ನು ಬರೊಬ್ಬರಿ 169 ನಿಮಿಷ (2 ಗಂಟೆ 49ನಿಮಿಷ) ಓದುವ ಮೂಲಕ ರಾಜ್ಯ ಬಜೆಟ್‌ ಮಂಡಿಸಿದರು.

2023-24ನೇ ಸಾಲಿನಲ್ಲಿ ಒಟ್ಟು 2,50,933 ಕೋಟಿ ರೂ.ಗಳ ರಾಜಸ್ವ ವೆಚ್ಚ. 54,374 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು 3,27,747 ಕೋಟಿ ರೂ. ವೆಚ್ಚದ ಬಜೆಟ್‌ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023-24ನೇ ಸಾಲಿನಲ್ಲಿ ರಾಜಸ್ವ ಜಮೆಗಳು 2,38,410 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿ.ಎಸ್‌.ಟಿ, ಪರಿಹಾರ ಒಳಗೊಂಡಂತೆ 1,75,653 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 12,500 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ.

ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರವು ನಿರೀಕ್ಷಿಸಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 85,818 ಕೋಟಿ ರೂ.ಗಳ ಒಟ್ಟು ಸಾಲಗಳು, 23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,24,478 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...