ಬಜೆಟ್‌ 23-24 | ಕರ್ನಾಟಕಕ್ಕೆ ಹೊಸ ಶಿಕ್ಷಣ ನೀತಿ ಜಾರಿ: ಮುಖ್ಯಮಂತ್ರಿ ಘೋಷಣೆ

Date:

ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಜೆಟ್‌ ಭಾಷಣದಲ್ಲಿ ಉನ್ನತ ಶಿಕ್ಷಣ ಇಲಾಖೆ ವಿಚಾರವಾಗಿ ವಿಷಯ ಪ್ರಸ್ತಾಪಿಸಿ, “ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ” ಎಂದರು.

ನಕಲಿ ಅಂಕಪಟ್ಟಿ ಹಾವಳಿಗೆ ತಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ಒದಗಿಸಲಾಗುವುದು. ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು Academic Bank of Credits ನಲ್ಲಿ ನೋಂದಾಯಿಸಿಕೊಂಡು ಹಾಗೂ ನೇಮಕಾತಿಯಲ್ಲಿ NAD/Digilocker ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಕ್ರಮಕೈಗೊಳ್ಳಲಾಗುವುದು” ಎಂದರು.

“ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ 224 ವಸತಿ ನಿಲಯಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆಯಡಿ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯ ವೇತನ ಕಾರ್ಯಕ್ರಮದಡಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು (Good Governance Indicators) ರಚಿಸಲಾಗಿದ್ದು, ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ನೀಡಲಾಗುವುದು. ವೃತ್ತಿ ಚೈತನ್ಯ ಯೋಜನೆಯಡಿಯಲ್ಲಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮಗಳನ್ನು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಯೋಜಿಸಲಾಗುವುದು” ಎಂದು ತಿಳಿಸಿದರು.

ಪಿಎಚ್‌.ಡಿ : ಏಕರೂಪತೆ ಜಾರಿ

“ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆಯನ್ನು ತರಲಾಗುವುದು. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ಬೆಂಗಳೂರಿನ ಎಸ್‌.ಕೆ.ಎಸ್‌.ಜೆ.ಟಿ.ಐ ಎಂಜಿನಿಯರಿಂಗ್‌ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ Technical Textile ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಿಸಲಾಗುವುದು” ಎಂದು ಹೇಳಿದರು.

“ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್‌ ಕೌನ್ಸಿಲ್‌ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿಗಳನ್ನು ಪ್ರಾರಂಭಿಸಲಾಗುವುದು. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್‌ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...