ವಿಸ್ಮಯಕಾರಿ ಘಟನೆ | 8 ಕಾಲು 2 ತಲೆಯುಳ್ಳ ಕರುವಿಗೆ ಜನ್ಮವಿತ್ತ ಎಮ್ಮೆ; ಕರು ಸಾವು

Date:

ಎಮ್ಮೆಯೊಂದು ಎಂಟು ಕಾಲು ಎರಡು ತಲೆಯುಳ್ಳ ಕರುವಿಗೆ ಜನ್ಮ ನೀಡಿರುವ ವಿಸ್ಮಯಕಾರಿ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಚಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದುರದೃಷ್ಟವಶಾತ್ ಕರು ಸಾವನ್ನಪ್ಪಿದೆ.

ಗ್ರಾಮದ ಶಿವಲಿಂಗಯ್ಯ ಎಂಬುವವರಿಗೆ ಸೇರಿದ ಎಮ್ಮೆ ಗುರುವಾರ ಕರು ಹಾಕಿದ್ದು, ಕರು ಎಂಟು ಕಾಲು, ಎರಡು ತಲೆ, ಎರಡು ಬಾಲವನ್ನು ಹೊಂದಿತ್ತು. ಆದರೆ, ಕರು ಎಮ್ಮೆಯ ಹೊಟ್ಟೆಯಲ್ಲೇ ಸಾವನ್ನಪ್ಪಿದೆ.

ಎಮ್ಮೆ ಕರು ಹಾಕಲು ಹರಸಾಹಸ ಪಟ್ಟಿತ್ತು. ಬಳಿಕ, ಸ್ಥಳಕ್ಕೆ ಪಶು ವೈದ್ಯರನ್ನು ಬಂದು, ಎಮ್ಮೆಗೆ ಹೆರಿಗೆ ಮಾಡಿಸಲು ಯತ್ನಿಸಿದರು. ಅದಾಗ್ಯೂ, ಕರು ಹೊರಬಂದಿರಲಿಲ್ಲ. ಬಳಿಕ, ಮತ್ತೋರ್ವ ಪಶು ವೈದ್ಯರನ್ನು ಕರೆಸಿ, ಶಸ್ತ್ರಚಿಕಿತ್ಸೆಯ ಮೂಲಕ ಕರುವನ್ನು ಹೊರ ತೆಗೆಯಲಾಗಿದೆ. ಆದರೆ, ಆ ವೇಳೆಗೆ ಕರು ಸಾವನ್ನಪ್ಪಿತ್ತು ಎಂದು ಶಿವಲಿಂಗಯ್ಯ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...