ಬಾಗೇಪಲ್ಲಿ | ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

Date:

ಕಾರ್ಮಿಕ ಇಲಾಖೆ‌ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಬೇಕೆಂದು ಆಗ್ರಹಿಸಿ ಸೂರ್ಯೋದಯ ‌ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಬಿ.ಆಂಜನೇಯ ರೆಡ್ಡಿ ನೇತೃತ್ವದಲ್ಲಿ ನೂರಾರು ಕಾರ್ಮಿಕರು ಆಗ್ರಹಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿ ಮುಂಭಾಗ ಮಂಗಳವಾರ ಸೂರ್ಯೋದಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿ.ಆಂಜನೇಯ ರೆಡ್ಡಿ, ತಾಲೂಕಿನಲ್ಲಿರುವ ಕಟ್ಟಡ ಕಾರ್ಮಿಕ ಸಮಸ್ಯೆಗಳಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ. ಕಾರ್ಮಿಕ ನಿರೀಕ್ಷಕರು ಸೇರಿದಂತೆ ಅಲ್ಲಿನ ಸಿಬ್ಬಂದಿ ವರ್ಗದವರು ನಾನಾ ಕಾರಣಗಳು ಹಾಗೂ ತಂತ್ರಾಂಶದ ನೆಪವೂಡ್ಡಿ ಫಲಾನುಭವಿಗಳಿಗೆ ಪಿಂಚಣಿ, ವೈದ್ಯಕೀಯ, ಹೆರಿಗೆ, ಮದುವೆ ಸಹಾಯಧನ ಅರ್ಜಿಗಳ ಸ್ವೀಕರಿಸದೆ ತಡೆವೊಡ್ಡಿದ್ದಾರೆ. ಇದರಿಂದಾಗಿ ಬಡ‌ಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ಸಿಗದಂತಾಗಿವೆ. ಇನ್ನು ಮುಂದೆ ಈ ರೀತಿ ನಿರ್ಲಕ್ಷ್ಯ ಮತ್ತು ಬೇಜವಬ್ದಾರಿ ತೋರಿದರೆ ಉಗ್ರ ಹೋರಾಟಗಳನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರ ಹೆಸರಲ್ಲಿ ಬೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರನ್ನು ಮಾತ್ರ ನೊಂದಣಿ ಅಥವಾ ನವೀಕರಣ ಮಾಡಬೇಕು. ರಾಜ್ಯ ಸರಕಾರದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಟ್ಟಡ ಕಾರ್ಮಿಕರು ಅವರ ಕುಟುಂಬಗಳಿಗೆ ಜಾರಿಗೊಳಿಸಬೇಕು. ಕಾರ್ಮಿಕ ಸಂಘಗಳಿಗೆ ಮಾತ್ರ ಮಾನ್ಯತೆ ನೀಡಬೇಕು ಮತ್ತು ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ದುರ್ಬಳಕೆ ನಿಲ್ಲಿಸಬೇಕು. ಜೀವಿತಾವಧಿ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆಯ ಬದಲಾಗಿ ಕಾರ್ಮಿಕ ಇಲಾಖೆಯೇ ನೀಡಬೇಕು. ಅರ್ಜಿಗಳ ವಿಲೆವಾರಿ ವಿಳಂಬ ತಡೆಗಟ್ಟಿ ಕಾರ್ಮಿಕ ಇಲಾಖೆಯೆಲ್ಲಿ ಭ್ರಷ್ಟ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಬೇಕು. ಬಹುದಿನದ ಕಾರ್ಮೀಕರ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ನೀಡಬೇಕು‌. ತಾಲೂಕು ಮಟ್ಟದಲ್ಲಿ ಕಾರ್ಮಿಕ ಕಲ್ಯಾಣ ಸುರಕ್ಷಾ ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಕಾರ್ಮಿಕ ನಿರೀಕ್ಷಕ ರಾಕೇಶ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ತಾಲೂಕಿನಲ್ಲಿ ಕಾರ್ಮಿಕ ಇಲಾಖೆಯಲ್ಲಿ 11,000 ಕಟ್ಟಡ ನಿರ್ಮಾಣ ಕಾರ್ಮಿಕರು ನೋಂದಣಿ ಮಾಡಿಸಿದ್ದು, ಇತ್ತೀಚೆಗೆ ಒಟ್ಟು 650 ನಕಲಿ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕಟ್ಟಡ ನಿರ್ಮಾಣ ಕಾರ್ಮಿಕರು ಹೊಸ ಕಾರ್ಮಿಕರ ಕಾರ್ಡುಗಳನ್ನು ಮಾಡಿಸಲು ಹೊಸ ಅರ್ಜಿಗಳನ್ನು ಸಲ್ಲಿಸಿದ್ದು, ಈ ಕಾರ್ಡ್ ಗಳನ್ನು ಸರಕಾರದ ಮಾನದಂಡಗಳನ್ನು ಆಧರಿಸಿ ಹೊಸ ಕಾರ್ಡುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಕೆಲಸ ಮಾಡುವ ಕಾರ್ಮಿಕರಿಗೆ ಇಲಾಖೆ ವತಿಯಿಂದ 120 ಕಿಟ್ ಬಂದಿದ್ದು, ಶಾಸಕರ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

ಈ ಸಂದರ್ಭದಲ್ಲಿ ಸಂಘದ ತಾಲೂಕು ಸಮಿತಿ ನಗರ ಅಧ್ಯಕ್ಷ ಲಕ್ಷ್ಮೀಪತಿ, ಬಿಳ್ಳೂರು ಸಮಿತಿ ಅಧ್ಯಕ್ಷ ಮಂಜುನಾಥ, ಮನ್ಸೂರ್ ಸೖಯದ್, ಮುಖಂಡರಾದ ಮೂರ್ತಿ, ಷಫೀವುಲ್ಲಾ, ಅಶೋಕ, ಅಮರನಾಥ, ಶಿವಕುಮಾರ್, ಆನಂದಚಾರಿ, ನರಸಿಂಹಮೂರ್ತಿ, ಕೃಷ್ಣಪ್ಪ, ಲಕ್ಷ್ಮೀನಾರಾಯಣ, ಕಲಿಮುಲ್ಲಾ, ರಾಮು, ಶ್ರೀನಿವಾಸ್ ನಾಗೇಂದ್ರ, ನಜೀರ್, ರಮೇಶ್.ಪಿ., ಬಾಬಾಜಾನ್ ಸೇರಿದಂತೆ ಹಲವಾರು ಕಾರ್ಮಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...