ಚಿಕ್ಕಬಳ್ಳಾಪುರ | ಬುಲೆಟ್ ಬೈಕ್ ಕದ್ದು, ಬಾವಿಯೊಳಗೆ ತಳ್ಳಿದ ದು‌ಷ್ಕರ್ಮಿಗಳು; ಶಂಕೆ

Date:

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ ಮಾಡಿರುವ ದುಷ್ಕರ್ಮಿಗಳು ಬೈಕನ್ನು ತೋಟದೊಳಗಿರುವ ಬಾವಿಯೊಳಗೆ ಹಾಕಿ ಪರಾರಿಯಾಗಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಈಶಾ ಫೌಂಡೇಶನ್ ಮಾರ್ಗದಲ್ಲಿರುವ ಹರಿಹರಪುರ ಗ್ರಾಮದ ರೈತ ಪಾಪಣ್ಣ ಎಂಬುವರಿಗೆ ಸೇರಿದ ತೋಟದಲ್ಲಿರುವ ಬಾವಿಯಲ್ಲಿ ಬುಲೆಟ್ ಬೈಕ್ ಇರುವುದು ಗುರುವಾರ ಪತ್ತೆಯಾಗಿದ್ದು, ನಾನಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ರೈತ ಪಾಪಣ್ಣ ಅವರ ಪಕ್ಕದ ಜಮೀನಿನ ರೈತರು ಗುರುವಾರ ಬೆಳಗ್ಗೆ ಬಾವಿಯೊಳಗಿನ ನೀರನ್ನು ತೋಟಕ್ಕೆ ಹಾಯಿಸಲು ಮುಂದಾಗಿದ್ದು, ಈ ವೇಳೆ ಬಾವಿಯೊಳಗೆ ಬೈಕ್ ಇರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಶ್ಚರ್ಯಗೊಂಡ ರೈತ ಬಾವಿಯಲ್ಲಿರುವ ನೀರನ್ನು ಖಾಲಿ ಮಾಡಿ ಬೈಕ್ ಮೇಲೆತ್ತಲು ಮುಂದಾಗಿದ್ದಾರೆ. ಅದು ಸಾಧ್ಯವಾಗದ ಹಿನ್ನೆಲೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬೈಕ್ ಮೇಲೆತ್ತಲು ಹರಸಾಹಸಪಟ್ಟಿದ್ದು, ಬೈಕ್ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರೈತ ಪಾಪಣ್ಣ, ಈ ಬಾವಿಯಲ್ಲಿನ ನೀರನ್ನ ಕೃಷಿಗೆ ಬಳಸುತ್ತಿರಲಿಲ್ಲ. ಪಕ್ಕದ ಜಮೀನಿನವರ ಬಾವಿ ನೀರನ್ನು ಹಾಯಿಸಿಕೊಳ್ಳುತ್ತೇವೆ ಎಂದು ಕೇಳಿದ್ದರು. ಅವರು ಮೋಟಾರ್‍ ಅಳವಡಿಸುವಾಗ ಬೈಕ್ ಇರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮಾಂತರ ಠಾಣೆ ಎಸ್ಐ, ಹರಿಹರಪುರ ಗ್ರಾಮದ ತೋಟದಲ್ಲಿರುವ ಬಾವಿಯಲ್ಲಿ ಬುಲೆಟ್ ಪತ್ತೆಯಾಗಿದೆ. ಬುಲೆಟ್ ಮುಷ್ಟೂರು ಗ್ರಾಮದ ಕಿರಣ್ ಕುಮಾರ್‍ ರೆಡ್ಡಿ ಎಂಬುವವರಿಗೆ ಸೇರಿದ್ದು, ಅವರ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಯಾರೋ ದುಷ್ಕರ್ಮಿಗಳು ಕಳ್ಳತನ ಮಾಡಿ ಬಾವಿಗೆ ಎಸೆದಿದ್ದಾರೆ. ಆರೋಪಿಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...