ಕೊಬ್ಬರಿ ಖರೀದಿ | 24,600 ರೈತರಿಗೆ 346.50 ಕೋಟಿ ರೂ. ಪಾವತಿ

Date:

2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿಯ ಮೊತ್ತವನ್ನು ರೈತರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಕೊಬ್ಬರಿ ಖರೀದಿಸಿದ ರೈತರಿಗೆ ಸುಮಾರು 346.50 ಕೋಟಿ ರೂ. ಮೊತ್ತವನ್ನು ಅವರ ಖಾತೆಗೆ ನೇರವಾಗಿ ಪಾವತಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಸುಮಾರು 24,600 ರೈತರಿಗೆ ಹಣವನ್ನು ಪಾವತಿಸಲಾಗಿದೆ. ಬಾಕಿ ಉಳಿದ ಸುಮಾರು 2,438 ರೈತರ ಖಾತೆಗೆ ಅಂದಾಜು 31.64ಕೋಟಿ ಬಾಬ್ತನ್ನು ಪಾವತಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಆಗಸ್ಟ್ 05ರವರೆಗೆ ಸುಮಾರು ಶೇ.92ರಷ್ಟು ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ ಎಂದಿದ್ದಾರೆ.

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.691 ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಸಚಿವ ಸೋಮಣ್ಣ ಇದೇ ವೇಳೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...