ತಮಿಳುನಾಡು ಸಿಎಂ‌ ಜೊತೆ ಡಿಕೆಶಿ ವ್ಯಾಪಾರ ಸಂಬಂಧ; ಕಾವೇರಿ ಸಮಸ್ಯೆ ಬಗೆಹರಿಯಲ್ಲ: ಯೋಗೇಶ್ವರ್ ಆರೋಪ

Date:

  • ಕಾವೇರಿ ವಿಷಯದಲ್ಲಿ ರಾಜಕೀಯ ದುರುದ್ದೇಶದಿಂದ ಡಿಕೆಶಿ ಡ್ರಾಮಾ
  • ಶಿವಕುಮಾರ್ ಅವರಿಗೆ ನಮ್ಮ ಜನರ ಬಗ್ಗೆ ಕಾಳಜಿಯೇ ಇಲ್ಲ: ಕಿಡಿ

ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಂದ ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿಲ್ಲ. ಅವರನ್ನು 30 ವರ್ಷಗಳಿಂದ ನೋಡುತ್ತಿರುವೆ. ಏಕೆಂದರೆ ತಮಿಳುನಾಡು ಮುಖ್ಯಮಂತ್ರಿಗಳ ನಡುವೆ ಒಳ್ಳೆಯ ಸ್ನೇಹ ಇದೆ. ಮುಂದುವರಿದು, ಅವರಿಬ್ಬರ ನಡುವೆ ವ್ಯಾಪಾರ-ವಹಿವಾಟಿನ ಸಂಬಂಧವಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ ಪಿ ಯೋಗೇಶ್ವರ್ ಆರೋಪಿಸಿದರು.

ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾವೇರಿ ವಿಷಯದಲ್ಲಿ ರಾಜಕೀಯ ದುರುದ್ದೇಶದಿಂದ ಡಿಕೆ ಶಿವಕುಮಾರ್‌ ಡ್ರಾಮಾ ಮಾಡುತ್ತಿದ್ದಾರೆ. ಇಬ್ಬರಿಬ್ಬರು ಬೆಂಗಳೂರಿನಲ್ಲಿ ವ್ಯಾಪಾರ- ವಹಿವಾಟು ಹೊಂದಿದ್ದಾರೆ” ಎಂದು ಹೇಳಿದರು.

ಡಿಕೆ ಶಿವಕುಮಾರ್ ಅವರಿಂದ ಜನ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಶಿವಕುಮಾರ್ ಅವರಿಗೆ ನಮ್ಮ ಜನರ ಬಗ್ಗೆ ಕಾಳಜಿಯೇ ಇಲ್ಲ. ಅದು ಇದ್ದಿದ್ದರೆ ತಮಿಳುನಾಡಿಗೆ ಯಾಕೆ ನೀರು ಬಿಡುತ್ತಿದ್ದರು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಭಾರತ’ವೆಂಬುದು ಶ್ರೇಷ್ಠವೇ? ‘ಇಂಡಿಯಾ’ ಕನಿಷ್ಠವೇ?

ಸಿಎಂ ಸಿದ್ದರಾಮಯ್ಯ ಹೆದರಬಾರದು

“ಸಿಎಂ ಸಿದ್ದರಾಮಯ್ಯ ಅವರು ಡಿಕೆ ಸಹೋದರರ ಧಮ್ಕಿಗೆ ಮಣಿಯಬಾರದು. ರಾಮನಗರದಲ್ಲಿ ಉದ್ದೇಶಿತ ವೈದ್ಯಕೀಯ ಕಾಲೇಜು ರಾಜೀವ್ ಗಾಂಧಿ ಅರೋಗ್ಯ ವಿಶ್ವವಿದ್ಯಾಲಯದ ಅವಿಭಾಜ್ಯ ಅಂಗ. ಅದರ ಸ್ಥಳಾಂತರ ಅವೈಜ್ಞಾನಿಕವಾಗಿದ್ದು, ಇದರ ಪರಿಣಾಮವನ್ನು ಡಿ.ಕೆ. ಸಹೋದರರು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಕಾಲೇಜಿಗಾಗಿ ರಾಮನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಬಂದ್‌ ಕರೆ ಗಮನಿಸಿಯಾದರೂ ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಕಾಲೇಜು ಆಗುವುದರಿಂದ ಐದೂ ತಾಲ್ಲೂಕುಗಳಿಗೂ ಅನುಕೂಲವಾಗಲಿದೆ. ಕಾಲೇಜಿಗಾಗಿ ಕೈಗೊಂಡಿರುವ ಬಂದ್‌ಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ” ಎಂದರು.

25ಕ್ಕೂ ಹೆಚ್ಚು ಸ್ಥಾನ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ, 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಹಕಾರಿಯಾಗಲಿದೆ. ಈ ಹಿನ್ನಲೆಯಲ್ಲಿ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ದುಡಿಯುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...