ಮಂಗಳೂರು ನಗರದ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
“ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113ರಲ್ಲಿನ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್‌ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ(ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ” ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಗಳೂರು | ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೊಗೆ ಮುತ್ತಿಗೆ
ಸಚಿವ ಪ್ರಿಯಾಂಕ್ ಖರ್ಗೆ ಅವರು ಕಳೆದ ತಿಂಗಳು 24ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡಲು ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.





