24 ನೂತನ ಸಚಿವರ ಸೇರ್ಪಡೆಯೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ

Date:

  • ರಾಜಭವನದದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರು
  • ರಾಜ್ಯಪಾಲರು, ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರಿಂದ ಸಚಿವರಿಗೆ ಅಭಿನಂದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು

ರಾಜಭವನದ ಗಾಜಿನ ಮನೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಫರೀದ್ ಅವರ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು.

ಹೆಚ್ ಕೆ ಪಾಟೀಲ್, ಕೃಷ್ಣಬೈರೇಗೌಡ, ಎನ್  ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಹೆಚ್. ಸಿ.ಮಹದೇವಪ್ಪ ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್,  ಶರಣಬಸಪ್ಪ ದರ್ಶನಾಪುರ. ಶಿವಾನಂದ ಪಾಟೀಲ್, ಆರ್.ಬಿ. ತಿಮ್ಮಾಪುರ್,  ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಮಾಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್,  ಡಾ.ಡಿ.ಸುಧಾಕರ್, ಸಂತೋಷ್ ಲಾಡ್, ಎನ್.ಎಸ್.ಬೋಸರಾಜು, ಬೈರತಿ ಸುರೇಶ್, ಸಾರೇಕೊಪ್ಪ ಮಧು ಬಂಗಾರಪ್ಪ, ಎಂ. ಸಿ.ಸುಧಾಕರ್ ಹಾಗೂ ಬಿ.ನಾಗೇಂದ್ರ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಬಾರಿಗೆ ಸಚಿವರಿವರು

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕೆ.ವೆಂಕಟೇಶ್, ಮಧುಗಿರಿ ವಿಧಾನಸಭಾ ಕ್ಷೇತ್ರದ ಕ್ಯಾತಸಂದ್ರ ನಂಜಪ್ಪ ರಾಜಣ್ಣ, ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಂಕಾಳ ವೈದ್ಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷೀ ಹೆಬ್ಬಾಳ್ಕರ್, ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸರಾಜು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬೈರತಿ ಸುರೇಶ್, ಸೊರಬ ವಿಧಾನಸಭಾ ಕ್ಷೇತ್ರದ ಮಧು ಬಂಗಾರಪ್ಪ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಂ‌ ಸಿ ಸುಧಾಕರ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ ನಾಗೇಂದ್ರ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಉಳಿದವರು ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.

ರಹೀಂ ಖಾನ್ ಅವರು ಇಂಗ್ಲಿಷ್ ಭಾಷೆಯಲ್ಲಿ ಹಾಗೂ ಉಳಿದೆಲ್ಲರೂ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ‌ಸ್ವೀಕರಿಸಿದರು.

ಅಲ್ಲದೆ, ಡಾ.ಎಚ್.ಸಿ. ಮಹದೇವಪ್ಪ ಅವರು ಸತ್ಯ ನಿಷ್ಠೆಯ ಹೆಸರಿನಲ್ಲಿ, ಕೆ ಎನ್ ರಾಜಣ್ಣ ಅವರು ಬುದ್ಧ ಬಸವ ಅಂಬೇಡ್ಕರ್ ಹಾಗೂ ಮ‌ಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ, ಶಿವಾನಂದ ಪಾಟೀಲ್ ಅವರು ಅಣ್ಣ ಬಸವಣ್ಣ ಅವರ ಹೆಸರಿನಲ್ಲಿ, ಎಸ್ ಎಸ್ ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜನತೆ ಮತ್ತು ತಮ್ಮ ತಾಯಿ ಗಿರಿಜಾ ಬಾಯಿ ಅವರ ಹೆಸರಿನಲ್ಲಿ, ರಹೀಂ ಖಾನ್ ಅವರು ಅಲ್ಲಾಹ್ ಹೆಸರಿನಲ್ಲಿ, ಬಿ ನಾಗೇಂದ್ರ ಅವರು ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ಹಾಗೂ ಉಳಿದ ಎಲ್ಲರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ರಾಜ್ಯಪಾಲರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಭಾಧ್ಯಕ್ಷರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಕಾರ್ಯಕ್ರಮ ಪ್ರಾರಂಭಿ‌ಲು ಅನುಮತಿ ಪಡೆದು ಸಮಾರಂಭವನ್ನು ನಿರ್ವಹಿಸಿ ನಿರೂಪಿಸಿದರು. ಸಮಾರಂದಲ್ಲಿ ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಜತೆಯಲ್ಲಿ ಸಂಪುಟ ದರ್ಜೆಯ ಸಚಿವರಾಗಿ, ಜಿ. ಪರಮೇಶ್ವರ, ಕೆಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ ಖರ್ಗೆ, ಜಮೀರ್ ಅಹ್ಮದ್ ಖಾನ್‌, ಎಂ ಬಿ ಪಾಟೀಲ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...