ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಜ.9ರಂದು ಬೀದರ ಬಂದ್‌

Date:

ಡಾ.ಬಿ.ಆರ್‌.ಅಂಬೇಡ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಜನವರಿ 9ರಂದು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್‌ವಾದಿಗಳ ಹೋರಾಟ ಸಮಿತಿಯಿಂದ ಬೀದರ್‌ ಬಂದ್‌ಗೆ ಕರೆ ನೀಡಲಾಗಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಬೀದರ್‌ ಬಂದ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ವಿರುದ್ಧ ಕೀಳಾಗಿ ಮಾತನಾಡಿದ್ದ ಅಮಿತ್‌ ಶಾ ಅವರು ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಡಿ.24ರಂದು ನಗರದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಅಮಿತ್ ಶಾ ಕ್ಷಮೆಯೂ ಕೇಳಿಲ್ಲ, ರಾಜೀನಾಮೆಯೂ ನೀಡಿಲ್ಲ. ಹೀಗಾಗಿ ಬೀದರ್‌ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಉಮೇಶಕುಮಾರ ಸ್ವಾರಳ್ಳಿಕರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಡಾ.ಬಿ.ಆರ್.ಅಂಬೇಡ್ಕರ್‌ವಾದಿಗಳು, ಪ್ರಗತಿಪರರು, ಹೋರಾಟಗಾರರು, ಕನ್ನಡಪರ, ದಲಿತಪರ ಹೋರಾಟಗಾರರು, ಸರ್ವಧರ್ಮ ಗುರುಗಳು, ವ್ಯಾಪಾರಸ್ಥರು, ಆಟೊ ಚಾಲಕರು, ಸಾಹಿತಿಗಳು, ಚಿಂತಕರು, ಕಾರ್ಮಿಕರು, ಯುವಕ-ಯುವತಿಯರು ಹಾಗೂ ವಿದ್ಯಾರ್ಥಿಗಳು ʼಬೀದರ ಬಂದ್ʼ ಗೆ ಬೆಂಬಲ ನೀಡಬೇಕು ಎಂದು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ಹೋರಾಟ ಸಮಿತಿಯ ಗೌರವಾಧ್ಯಕ್ಷ ರಾಜಕುಮಾರ ಮೂಲಭಾರತಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್ : ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಸಭೆಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ವಿಷ್ಣುವರ್ಧನ್ ವಾಲ್ದೋಡ್ಡಿ, ಅಭಿ ಕಾಳೆ, ಪ್ರಧಾನ ಕಾರ್ಯದರ್ಶಿ ಮಹೇಶ ಗೋರನಾಳಕರ್, ಕಲ್ಯಾಣರಾವ ಭೋಸ್ಲೆ, ಚಂದ್ರಕಾಂತ ನಿರಾಟೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...