ಹಸಿ ಬರಗಾಲ ಘೋಷಣೆಗೆ ಆಗ್ರಹಿಸಿ ಅ.13ರಂದು ಕಲಬುರಗಿ ಬಂದ್‌ಗೆ ಕರೆ

Date:

ಪ್ರವಾಹ, ಅತಿವೃಷ್ಟಿಯಿಂದ ಬೆಳೆಹಾನಿಯಾಗಿದ್ದು, ಕಲಬುರಗಿ ಜಿಲ್ಲೆಯನ್ನು ಅತಿವೃಷ್ಟಿ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ, ಸಾಲ ಮನ್ನಾ ಸೇರಿದಂತೆ ಈ ಪ್ರದೇಶವನ್ನು ‘ಹಸಿ ಬರಗಾಲ’ ಎಂದು ಘೋಷಿಸಬೇಕೆಂದು ಆಗ್ರಹಿಸಿ ಅ.13ರಂದು ಕಲಬುರಗಿ ಬಂದ್‌ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ.

ನಗರದಲ್ಲಿ ಜಿಲ್ಲಾ ಪತ್ರಿಕಾ ಭವನದಲ್ಲಿ ರೈತ ಮುಖಂಡ ದಯಾನಂದ ಪಾಟೀಲ್ ಮಾತನಾಡಿ, ʼವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 13ರಂದು ಬಂದ್‌ಗೆ ಕರೆ ನೀಡಲಾಗಿದೆ. ಅಂದು ಕಲಬುರಗಿ ನಗರದ ಪ್ರಮುಖ ರಸ್ತೆಗಳಾದ ಆಳಂದ ಚೆಕ್ ಪೋಸ್ಟ್, ರಾಮಮಂದಿರ ಸರ್ಕಲ್, ಸೇಡಂ ಹಾಗೂ ಹುಮನಾಬಾದ ರಿಂಗ್ ರೋಡ್, ಹೀರಾಪುರ ಕ್ರಾಸ್, ಹೈಕೋರ್ಟ್ ರಸ್ತೆ ಹಾಗೂ ಶಹಾಬಾದ ರಿಂಗ್ ರೋಡ್‌ಗಳಲ್ಲಿ ಎತ್ತಿನಗಾಡಿ ಹಾಗೂ ಟ್ರಾಕ್ಟರ್‌ಗಳೊಂದಿಗೆ ರೈತರು ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದುʼ ಎಂದು ತಿಳಿಸಿದರು.

ʼರೈತ, ದಲಿತ, ಕನ್ನಡ ಪರ, ಮಹಿಳಾ ಪರ ಸಂಘಟನೆಗಳು, ಕೆಎಸ್‌ಆರ್‌ಟಿಸಿ ಸಾರಿಗೆ ಸಂಘ, ಬಿದಿ ಬದಿ ವ್ಯಾಪರಸ್ಥರು, ಅಡತ್ ಬಜಾರ್, ಲಾರಿ ಮಾಲೀಕರ ಸಂಘ, ಪೆಟ್ರೋಲ್ ಬಂಕ್, ಆಟೋ ಚಾಲಕರ ಸಂಘಗಳು ಬಂದ್‌ ಕರೆಗೆ ಸಂಪೂರ್ಣ ಬೆಂಬಲ ಎಂದು ರೈತ ಮುಖಂಡರು ಭೀಮಾಶಂಕರ ಮಾಡ್ಯಾಳ ಹಾಗೂ ಎ ಬಿ ಹೊಸಮನಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 11 at 7.42.39 PM
ಕಲಬುರಗಿ ಬಂದ ಕರೆಗೆ ಚೇಂಬರ್ ಆಫ್ ಕಾಮರ್ಸ್ ಬೆಂಬಲ ಘೋಷಿಸಿದೆ.

ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, “‘ಹಸಿ ಬರಗಾಲ’ ಎಂದು ಘೋಷಿಸಿ, ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು. ಹಿಂಗಾರು ಬೆಳೆ ಬಿತ್ತನೆಗೆ ಬೀಜ, ರಸಗೊಬ್ಬರ ಹಾಗೂ ಸಾಲಮನ್ನಾ ಮಾಡಬೇಕು, ರೈತರ ಮಕ್ಕಳ ಶಿಕ್ಷಣಕ್ಕಾಗಿ ಖಾಸಗಿ ಶಾಲಾ, ಕಾಲೇಜಿನ ಎರಡನೇ ಕಳತಿನ ಶುಲ್ಕ ಮನ್ನಾ ಮಾಡಬೇಕು” ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಉಮಾಪತಿ ಪಾಟೀಲ್, ಅರ್ಜುನ್ ಗೊಬ್ಬೂರು, ಜಗದೇವಿ ಹೆಗಡೆ, ರವಿ ದೇಗಾವ್, ಮಂಜುಳಾ ಭಜಂತ್ರಿ, ಮೊಬಿನ್ ಅಹ್ಮದ್, ನಾಗೇಂದ್ರಪ್ಪ ಥಂಬೆ, ಮಹೇಶ್ ಕಡೆಚೂರು, ಕರೆಪ್ಪಾ ಕರಗೊಂಡ, ಮಲ್ಲನಗೌಡ ಪಾಟೀಲ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...