ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಬಿ ಎಲ್‌ ಸಂತೋಷ್:‌ ಪ್ರಿಯಾಂಕ್‌ ಖರ್ಗೆ ಲೇವಡಿ

Date:

  • ಒಂದು ದಿನವಲ್ಲ ಒಂದು ತಿಂಗಳು ಸಮಯ ನೀಡುತ್ತೇವೆ
  • ‘ನಮ್ಮ ಪಕ್ಷ ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ’

ಕಾಂಗ್ರೆಸ್‌ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಈ ಸಂಬಂಧ ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಬಿ ಎಲ್ ಸಂತೋಷ್ ಅವರಿಗೆ ಒಂದು ಸವಾಲು, ಒಂದು ದಿನವಲ್ಲ ಒಂದು ತಿಂಗಳು ಸಮಯ ನೀಡುತ್ತೇವೆ, ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದು ಸವಾಲು ಹಾಕಿದ್ದಾರೆ.

“ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು, ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು ತಾಕತ್ತು ಇದೆಯೇ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ನಮ್ಮ ಸರ್ಕಾರ ರಚನೆಯಾಗಿ ನೂರು ದಿನಗಳು ಕಳೆದಿವೆ. ನೂರು ದಿನಗಳಲ್ಲಿ ನೂರಾರು ಜನಪರ ಯೋಜನೆಗಳು, ನಿರ್ಧಾರಗಳೊಂದಿಗೆ ಮುನ್ನಡೆಯುತ್ತಿದ್ದೇವೆ. ಆದರೆ ಬಿಜೆಪಿಗೆ ನೂರು ದಿನಗಳು ಕಳೆದರೂ ಮೂರು ನಾಯಕರನ್ನು ಆಯ್ಕೆ ಮಾಡಲಾಗಿಲ್ಲ; ‘ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ವಿಪಕ್ಷ ನಾಯಕ’ ನೂರು ದಿನಗಳಾದರೂ ಈ ಮೂರು ಹುದ್ದೆಗೆ ನಾಯಕರು ಸಿಗದಷ್ಟು ರಾಜಕೀಯ ದಿವಾಳಿತನ ಎದುರಿಸುತ್ತಿದೆಯೇ ಬಿಜೆಪಿ? ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರಿಗೆ ಈ ಮೂರು ಹುದ್ದೆಗಳಿಗೆ ನೇಮಕದ ಗ್ಯಾರಂಟಿ ಇಲ್ಲದಿರುವುದು ದುರಂತ!” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...