ಸಮರ್ಥ ಆಡಳಿತಗಾರರು ಬದಲಾವಣೆ ತರುತ್ತಾರೆಯೇ ಹೊರತು ಹೆಸರು ಬದಲಿಸುವುದಿಲ್ಲ: ಪ್ರಿಯಾಂಕ್‌ ಖರ್ಗೆ ಕಿಡಿ

Date:

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ! ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರವು ದೇಶಕ್ಕೆ ಇಂಡಿಯಾ ಬದಲು ಭಾರತ್‌ ಎಂದು ನಾಮಕರಣ ಮಾಡಲಾಗುತ್ತಿದೆ ಎನ್ನುವ ಚರ್ಚೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “2014ರ ಮೊದಲು ಅಮೆರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ ‘ಮಣಿಪುರ್ ಮಾಡೆಲ್’ ಸೃಷ್ಟಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ!” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...