ಬೀದರ್‌ | ಜಿಎನ್‌ಡಿ ಕಾಲೇಜು ಪ್ರಕರಣ; ಬಿಜೆಪಿ ಆರೋಪ ರಾಜಕೀಯ ಪ್ರೇರಿತ : ಸಚಿವ ರಹೀಂ ಖಾನ್

Date:

ಬೀದರ್‌ ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ನಾನಾಗಲಿ, ನನ್ನ ಮಗನಾಗಲಿ ಹಸ್ತಕ್ಷೇಪ ಮಾಡಿಲ್ಲ. ನಮ್ಮ ವಿರುದ್ಧದ ಬಿಜೆಪಿ ಆರೋಪ ಶುದ್ಧ ಸುಳ್ಳು, ರಾಜಕೀಯ ಪ್ರೇರಿತವಾಗಿದೆ ಎಂದು ಸ್ಥಳೀಯ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್ ಸ್ಪಷ್ಟಪಡಿಸಿದ್ದಾರೆ.

‘ಜಿಎನ್‌ಡಿಯಲ್ಲಿ ನಡೆದ ಘಟನೆ ದುರದೃಷ್ಟಕರವಾದುದು. ಅದನ್ನು ನಾನು ಖಂಡಿಸುತ್ತೇನೆ. ಯಾವುದೇ ಧರ್ಮದ ಹೆಸರಿನಲ್ಲಿ ಜಗಳ, ಗಲಾಟೆ, ಹೊಡೆದಾಟ ಮಾಡುವುದು ನಾಗರಿಕ ಸಮಾಜಕ್ಕೆ ಶೋಭೆ ತರುವುದಿಲ್ಲ. ಆದರೆ, ಈ ಘಟನೆಗೆ ಸಂಬಂಧಿಸಿ ಬಿಜೆಪಿಯವರು ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ನೀಡಿ ವಿನಾಕಾರಣ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಈ ಘಟನೆಗೆ ಸಂಬಂಧಿಸಿದಂತೆ ನಾನು ಯಾರ ಮೇಲೆಯೂ ಒತ್ತಡ ಹೇರಿಲ್ಲ. ನನ್ನ ಮಗ ಇರ್ಷಾದ್ ಖಾನ್ ಎರಡು ವಾರಗಳಿಂದ ಸ್ಥಳೀಯವಾಗಿ ಇಲ್ಲ. ಆದರೆ, ವಿನಾಕಾರಣ ಮಗನ ಬಿಜೆಪಿಯವರು ನನ್ನ ವಿರುದ್ಧ ಮಾಡುತ್ತಿರುವ ಇಲ್ಲ ಸಲ್ಲದ ಆರೋಪಗಳಿಂದ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನೆಂದೂ ಜಾತಿ ರಾಜಕೀಯ ಮಾಡಿಲ್ಲ. ಎಲ್ಲರನ್ನೂ ಗೌರವದಿಂದ ಕಾಣುತ್ತೇನೆ. ಬೀದರ್ ಕ್ಷೇತ್ರದ ಮತದಾರರು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದೇ ಸಾಕ್ಷಿ. ಸರ್ವರ ಹಿತಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ರಾಜಕೀಯ ಲಾಭ, ಸ್ವಾರ್ಥಕ್ಕಾಗಿ ಸುಳ್ಳು ಹೇಳಿಕೆ ನೀಡಿ ದ್ವೇಷ ಹುಟ್ಟಿಸುವ, ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುವವ ನಾನಲ್ಲ, ಭವಿಷ್ಯದಲ್ಲಿ ಈ ರೀತಿಯ ಘಟನೆಗಳಿಗೆ ಅಸ್ಪದ ಕೊಡಬಾರದು ಎಂದು ತಿಳಿಸಿದ್ದಾರೆ.

“ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರಕ್ಕಾಗಿ ಪೂರ್ವನಿಗದಿಯಂತೆ ನಾನು ಹಾಗೂ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಘಟನೆ ನಡೆದ ದಿನ ಜಿಎನ್‌ಡಿ ಕಾಲೇಜಿಗೆ ಹೋಗಿದ್ದೆವು. ನಾವು ಹೋಗುವ ಎರಡೂರು ಗಂಟೆಗಳ ಮೊದಲೇ ಗಲಾಟೆ ಮುಗಿದಿತ್ತು. ನಾವು ಅಲ್ಲಿಗೆ ಹೋದ ನಂತರವೇ ಘಟನೆ ಬಗ್ಗೆ ತಿಳಿದದ್ದು. ಹಲ್ಲೆ ನಡೆಸಿದವರ ಪರ ನಿಂತಿದ್ದೇವೆ. ಹಲ್ಲೆ ನಡೆಸಿದವರು ಪ್ರಕರಣ ದಾಖಲಿಸಲು ಒತ್ತಡ ಹೇರಿದ್ದೇವೆ ಎಂದು ಬಿಜೆಪಿಯವರು ಕಟ್ಟುಕತೆ ಸೃಷ್ಟಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

“ಬೀದ‌ರ್ ಸೂಫಿ-ಸಂತರ ನಾಡು. ಸೌಹಾರ್ದತೆಗೆ ಹೆಸರಾಗಿದೆ. ಜಿಎನ್‌ಡಿ ಕಾಲೇಜಿನ ಘಟನೆಯನ್ನು ರಾಜಕೀಯ ಸ್ವಾರ್ಥಕ್ಕೆ ಯಾರೂ ಬಳಸಿಕೊಳ್ಳಬಾರದು. ಶಾಂತಿಗೆ ಹೆಸರುವಾಸಿಯಾದ ಬೀದರ್‌ನಲ್ಲಿ ಅಶಾಂತಿ ಸೃಷ್ಟಿಸಲು, ಕೋಮು ಸೌಹಾರ್ದಕ್ಕೆ ಧಕ್ಕೆ ತರಲು ಯಾರೂ ಪ್ರಯತ್ನ ಮಾಡಬಾರದು’ ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...