ಮದುವೆಯಾಗುವುದಾಗಿ ನಂಬಿಸಿ ಮೋಸ: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಪ್ರಕರಣ ದಾಖಲು

Date:

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಮಾಜಿ ಸಚಿವ, ಬೀದರ್‌ ಜಿಲ್ಲೆಯ ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದು ಈ ಸಂಬಂಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್‌ ಚೌಹಾಣ್ ಅವರು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಔರಾದ್‌ನ ಹೊಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೆ ಪೊಲೀಸರು ದೂರು ಸ್ವೀಕರಿಸಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿರುವುದಾಗಿ ಯುವತಿ ತಿಳಿಸಿದ್ದರು.

ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ನಂಬಿಸಿ ಮೋಸ : ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರನ ವಿರುದ್ಧ ದೂರು; ಇದು ರಾಜಕೀಯ ಷಡ್ಯಂತ್ರ ಎಂದ ಚವ್ಹಾಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ ಪ್ರತೀಕ್ ಚೌಹಾಣ್ ವಿರುದ್ಧ ಆರೋಪಿಸಿದ್ದು, ನ್ಯಾಯ ಒದಗಿಸುವಂತೆ ಸಂತ್ರಸ್ತ ಯುವತಿ ಮನವಿ ಮಾಡಿದ್ದರು. ಈ ಸಂಬಂಧ ಬೀದರ್‌ನಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ಸುಳ್ಳು ಆರೋಪ ಎಂದಿರುವ ಪ್ರಭು ಚೌಹಾಣ್, ದೂರುದಾರ ಯುವತಿಯ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಬೀದರ್ | ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ‌ ವಿರುದ್ಧ ಅತ್ಯಾಚಾರ ಆರೋಪ; ಯುವತಿ ವಿರುದ್ಧವೇ ಪ್ರತ್ಯಾರೋಪ ಮಾಡಿದ ಶಾಸಕ

“ದೂರು ನೀಡಿರುವ ಯುವತಿ ಬೇರೆಯೊಬ್ಬರ ಜೊತೆ ಮೆಸೇಜ್​, ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಳು. ಹೀಗೆ ಮಾಡುವ ಯುವತಿಯ ಜೊತೆ ಮಗ ಹೇಗೆ ಮದುವೆಯಾಗಲು ಸಾಧ್ಯ? ನಿಶ್ಚಿತಾರ್ಥವಾದ ದಿನದಿಂದಲೂ ಯುವತಿಗೆ ಬುದ್ಧಿವಾದ ಹೇಳಿದ್ದೇವೆ. ಹುಡುಗಿಯ ಸೋದರ ಮಾವನನ್ನು ಕರೆದು ಆಕೆಗೆ ಬುದ್ದಿ ಹೇಳುವಂತೆ ಸೂಚಿಸಿದ್ದೇವೆ. ಆದರೆ, ಆಕೆ ತನ್ನ ನಡೆತೆಯನ್ನು ಬದಲಿಸಿಕೊಂಡಿಲ್ಲ” ಎಂದು ಯುವತಿ ವಿರುದ್ಧವೇ ಪ್ರತ್ಯಾರೋಪ ಮಾಡಿದ್ದಾರೆ.

“ನನ್ನ ಕುಟುಂಬದ ಹೆಸರು ಕೆಡಿಸಲು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅವರ ಗ್ಯಾಂಗ್‌ ಕೆಲಸ ಮಾಡುತ್ತಿದೆ. ನಾವು ಏನೇ ಮಾಡಿದರೂ, ಆ ಗ್ಯಾಂಗ್​ ಅಡ್ಡಿಪಡಿಸುತ್ತದೆ. 2014ರಿಂದಲೂ ಆ ಗ್ಯಾಂಗ್​ ನನ್ನ ವಿರುದ್ಧ ಕೆಲಸ ಮಾಡುತ್ತಿದೆ. ಈಗ ದೂರುದಾರ ಯುವತಿಯನ್ನು ಕರೆದೊಯ್ದು ಮಹಿಳಾ ಆಯೋಗಕ್ಕೆ ದೂರು ಕೊಡಿಸಿದೆ. ನನ್ನ ಮಗ, ಸೊಸೆ ಹಾಗೂ ಅವರ ಸಹೋದರಿ ಶಿರಡಿಗೆ ಹೋಗಿದ್ದಾರೆ. ನನ್ನ ಮಗ ಯಾವುದೇ ಉಲ್ಟಾಪಲ್ಟಾ ಕೆಲಸ ಮಾಡಿಲ್ಲ. ಬೇಕಿದ್ದರೆ ವೈದ್ಯಕೀಯ ತಪಾಸಣೆ ಮಾಡಿಸಲಿ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...