ಉಡುಪಿ | ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

Date:

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ, ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಇವರು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಮಾತನಾಡಿರುವುದಾಗಿ ದೂರಲಾಗಿದೆ.

ಈ ಹೇಳಿಕೆ ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತಿದೆ. ರಿಯಾಝ್ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...