ಚಿಕ್ಕಬಳ್ಳಾಪುರ |‌ ಜಾತಿ ಜನಗಣತಿ: ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಿ; ಕೈವಾರ ಮಂಜುನಾಥ್

Date:

ಒಳಮೀಸಲಾತಿ ಶೈಕ್ಷಣಿಕ ಸಮೀಕ್ಷೆ ಸೋಮವಾರದಿಂದ ನಡೆಯಲಿದೆ. ರಾಜ್ಯದಲ್ಲಿರುವ ಛಲವಾದಿ ಸಮುದಾಯಕ್ಕೆ ಈ ಸಮೀಕ್ಷೆ ಬಹಳ ಮುಖ್ಯವಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಸಮುದಾಯ ಬಾಂಧವರು ಸಮೀಕ್ಷೆಗೆ ಬಂದಾಗ ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಬೇಕು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಸಂಚಾಲಕ ಕೈವಾರ ಮಂಜುನಾಥ್‌ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಕರೆಯಲಾಗುತ್ತಿದೆ. ಇದನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಸರಕಾರ ನಾಗಮೋಹನ್ ದಾಸ್ ಅವರ ಆಯೋಗವನ್ನು ರಚನೆ ಮಾಡಿದೆ. ಅದಕ್ಕಾಗಿ ಛಲವಾದಿ ಮಹಾಸಭಾದ ಮುಖಂಡರು ಮನೆ ಮನೆಗೆ ತೆರಳಿ ಸಮುದಾಯದ ಹೆಸರುಗಳನ್ನು ಸ್ಪಷ್ಟವಾಗಿ ಬರೆಸಬೇಕು ಎಂದು ಮನವಿ ಮಾಡಿದರು.

ಎಕೆ, ಎಡಿ ಎಂಬ ಜಾತಿಯನ್ನು ಬರೆಸಬಾರದು. ನಮ್ಮ ಸಮುದಾಯದವರು ಬೌದ್ಧ ಧರ್ಮಕ್ಕೆ ಮತಾಂತರ ಆಗಿದ್ದರೆ, ಬೌದ್ಧ ಎಂದು ಬರೆಸಬೇಡಿ. ಬದಲಾಗಿ ತಮ್ಮ ಮೂಲ ಜಾತಿಯಾದ ಹೊಲೆಯ ಅಥವಾ ಹೊಲೆಯರು ಎಂದೇ ಬರೆಸಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮೀಕ್ಷೆ ಬಹಳ ಕಟ್ಟುನಿಟ್ಟಿನ ಸಮೀಕ್ಷೆಯಾಗಿದ್ದು, ಇದರಿಂದ ಸಮುದಾಯಕ್ಕೆ ಹೆಚ್ಚಿನ ಅನುಕೂಲ ಆಗಲಿದೆ. ಎಲ್ಲರೂ ಹೊಲೆಯ ಅಥವಾ ಬ್ರಾಕೆಟ್‌ನಲ್ಲಿ ಛಲವಾದಿ ಎಂದು ಬರೆಸಬೇಕು ಎಂದು ಹೇಳಿದರು.

ಮೈಸೂರು ಭಾಗದಲ್ಲಿ ಎಕೆ, ಎಡಿ ಸಾಮಾನ್ಯವಾಗಿ ಬರಸುತ್ತಿರುವ ಜಾತಿ. ಆದರೆ ಅದು ಜಾತಿಯಲ್ಲ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಮುದಾಯದ ಮುಖಂಡರು ಸಭೆ ನಡೆಸಿ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು.

ಮತ್ತೊಬ್ಬ ಮುಖಂಡ ಮಾತನಾಡಿ, ಮೇ 5ರಂದು ಜಾತಿ ಗಣತಿ ನಡೆಯಲಿದ್ದು, ಅವರವರ ಗ್ರಾಮದಲ್ಲೂ ಶಿಕ್ಷಿತರು ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಸಮುದಾಯದ ಬೆಳವಣಿಗೆ ಸಾಧ್ಯ ಆಗಲಿದೆ ಎಂದು ಹೇಳಿದರು.

ಬೇರೆ ಬೇರೆ ಜಿಲ್ಲೆಗಳಲ್ಲಿ ನಮ್ಮ ಸಮುದಾಯದ ಕುರಿತು ಸಾಕಷ್ಟು ಗೊಂದಲ ಇದೆ. ಆದ್ದರಿಂದ ಹೊಲೆಯ ಅಥವಾ ಹೊಲೆಯರು ಎಂದು ಖಡ್ಡಾಯವಾಗಿ ಬರೆಸಬೇಕು ಎಂದು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಾತಿ ಜನಗಣತಿ; ಕಾಲಂ 61ರಲ್ಲಿ ಮಾದಿಗ ಎಂದು ನಮೂದಿಸಿ; ಸಿದ್ದರಾಜು ಸ್ವಾಮೀಜಿ

ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ತ್ಯಾಗರಾಜ್ ಮಾತನಾಡಿ, ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಆಯೋಗಗಳು ಕೊಟ್ಟಿರುವ ವರದಿ ಅವೈಜ್ಞಾನಿಕ ಆಗಿದೆ.  ಹಾಗಾಗಿ ಸರಕಾರಕ್ಕೆ ನಾವು ಮನವಿ ಕೊಟ್ಟಿದ್ದೆವು. ಸರಕಾರ ನಮ್ಮ ಮನವಿಯನ್ನು ಪರಿಗಣಿಸಿ ಇದೀಗ ಮತ್ತೆ ಮರುಸಮೀಕ್ಷೆಗೆ ಆದೇಶ ಹೊರಡಿಸಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ ಸರಿಯಾದ ಜಾತಿ ಬರೆಸಬೇಕು ಎಂದು ಮನವಿ ಮಾಡಿದರು.

ಛಲವಾದಿ ಮಹಾಸಭಾದ ಕೃಷ್ಣಪ್ಪ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ್, ನಾರಾಯಣಸ್ವಾಮಿ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...