ಜಾತಿ ಕ್ರೌರ್ಯ | ಬೀದರ್: ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ

Date:

ಪ್ರಬಲ ಜಾತಿಯ ಯುವತಿ ಮತ್ತು ದಲಿತ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಯ ಬಗ್ಗೆ ತಿಳಿದ ಯುವತಿಯ ಕುಟುಂಬಸ್ಥರು ದಲಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಹತ್ಯೆಗೈದಿರುವ ಜಾತಿ ಕ್ರೌರ್ಯದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕುಶನೂರು ಗ್ರಾಮದ ನಿವಾಸಿ, ದಲಿತ ಯುವಕ ಸುಮಿತ್ ಕುಮಾರ್ (18) ಅವರನ್ನು ಪ್ರಬಲ ಜಾತಿಯವರು ಕೊಲೆ ಮಾಡಿದ್ದಾರೆ. ಯುವಕ ಕಮಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್‌ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ, ತನ್ನದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ.

ಯುವಕ-ಯುವತಿಯ ಪ್ರೀತಿಯ ಬಗ್ಗೆ ತಿಳಿದ ಯುವತಿಯ ತಂದೆ ಮತ್ತು ಸಹೋದರ ಸುಮಿತ್‌ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮಹಾರಾಷ್ಟ್ರದ ಲಾತೂರ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ಕುಶನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ತಂದೆ, ಆರೋಪಿ ಕಿಶನ್ ಗಾವ್ಲಿ (55) ಮತ್ತು ಸಹೋದರ ರಾಹುಲ್ ಗಾವ್ಲಿ (24) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...