ಬೀದರ್‌ | ಜ.17 ರಿಂದ 19ರವರೆಗೆ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜನವರಿ 17 ರಿಂದ 19 ರವರೆಗೆ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025ರ ಸದುಪಯೋಗವನ್ನು ರೈತರು, ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ʼಈ ಮೇಳದಲ್ಲಿ ಜಾನುವಾರು ಮತ್ತು ಕುಕ್ಕಟ ತಳಿಗಳ ಪ್ರದರ್ಶನ, ಶ್ವಾನ ಪ್ರದರ್ಶನ, ಸಣ್ಣ ಮತ್ತು ಮುದ್ದು ಪ್ರಾಣಿ ಪಕ್ಷಿಗಳ ಪ್ರದರ್ಶನ, ಮೀನು ತಳಿಗಳು, ಅಲಂಕಾರಿಕ ಮೀನುಗಳ ಪ್ರದರ್ಶನ, ಮಾದ್ಯವರ್ಧಿತ ಹಾಲು ಮತ್ತು ಹಾಲಿನ ಉತ್ಪನ್ನಗಳ ಪ್ರದರ್ಶನ, ವಿವಿಧ ಹೊಸ ತಂತ್ರಜ್ಞಾನಗಳ ಯಂತ್ರೋಪಕರಣಗಳ ಪ್ರದರ್ಶನ ಇರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಮೇಳದಲ್ಲಿ ರೈತರು ಭಾಗವಹಿಸುವಂತೆ ನೋಡಿಕೊಳ್ಳಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಿಧ ಇಲಾಖೆಗಳಿಂದ 15-20 ಮಳಿಗೆಗಳನ್ನು ನಿರ್ಮಿಸಿ ಎನ್‌ಆರ್‌ಎಲ್‌ಎಂ ಮತ್ತು ಮಹಿಳಾ ರೈತರಿಗೆ ಶಕ್ತಿ ಯೋಜನೆಯಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತಿಗಳಿಂದ ಹೆಚ್ಚಿನ ಪ್ರಚಾರ ನೀಡಿ ರೈತರಿಗೆ ಸೇರಿಸಬೇಕು. ಈ ಮೇಳದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಮತ್ತು ಶಾಲೆಗಳ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆಗಳ ವಿಶ್ವವಿದ್ಯಾಲಯ ಬೀದರನ ವಿಸ್ತರಣಾ ನಿರ್ದೇಶಕ ಡಾ.ಬಸವರಾಜು ಅವಟಿ ಮಾತನಾಡಿ, ʼಕಾರ್ಯಕ್ರಮದ ಉದ್ದೇಶಗಳು ಮತ್ತು ಯುವಕರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇರುವ ಪ್ರಾಮುಖ್ಯತೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025ರ ಪೋಸ್ಟರ ಬಿಡುಗಡೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಿಯಾಂಕ್‌ ಖರ್ಗೆ ಆಪ್ತನಿಂದ ಬೆದರಿಕೆ ಪ್ರಕರಣ; ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು

ಕಾರ್ಯಕ್ರಮದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಚನ್ನಪ್ಪಗೌಡ ಬಿರಾದಾರ, ಪ್ರಾದ್ಯಾಪಕರಾದ ಡಾ.ಎಂ.ಕೆ.ತಾಂದಳೆ, ಡಾ.ಶ್ರೀಕಾಂತ ಕುಲಕರ್ಣಿ, ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶ ಕುಮಾರ ರಾಠೋಡ, ಡಾ.ವೆಂಕನಗೌಡ, ಡಾ.ಅಕ್ಷಯಕುಮಾರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ನರಸಪ್ಪ, ಡಾ.ಗೌತಮ ಅರಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...