ಕಾವೇರಿ ವಿವಾದ | ಸೆ.23ಕ್ಕೆ ‘ಮಂಡ್ಯ ಬಂದ್‌’ಗೆ ಕರೆ

Date:

ತಮಿಳುನಾಡಿಗೆ ಮುಂದಿನ 15 ದಿನ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರೈತರು, ಸೆ.23ರಂದು ಮಂಡ್ಯ ಬಂದ್‌ಗೆ ಕರೆ ನೀಡಿದ್ದಾರೆ.

ಸುಪ್ರೀಂ ನಿರ್ದೇಶನದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು, ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಲಗಿ ರೈತರು ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಸುಪ್ರೀಂ ಕೋರ್ಟಿನ ಆದೇಶವನ್ನು ಧಿಕ್ಕರಿಸಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು, ಸೆ.23ರ ಶನಿವಾರ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

ಬಂದ್‌ ಕರೆಯ ಹಿನ್ನೆಲೆಯಲ್ಲಿ ಬಂದ್ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾಮಾಜಿಕ ಹೋರಾಟಗಾರರೊಂದಿಗೆ ಸೆ.22ರಂದು ಸಭೆ ಕೂಡ ಕರೆಯಲಾಗಿದೆ.

ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಮತ್ತೆ ಆದೇಶ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರದ ಕಾನೂನು ತಜ್ಞರು ವಿಫಲವಾಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...