ಕಾವೇರಿ ವಿವಾದ | ವಿಧಾನಸೌಧ ಮುತ್ತಿಗೆಗೆ ಮುಂದಾದ ಕರವೇ

Date:

  • ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಸರ್ಕಾರಕ್ಕೆ ಕರವೇ ಎಚ್ಚರಿಕೆ
  • ರಾಜ್ಯದ ಎಲ್ಲ ಸಂಸದರು ರಾಜೀನಾಮೆ ನೀಡಬೇಕು: ರೈತರ ಆಗ್ರಹ

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ.

ಕಾವೇರಿಗಾಗಿ ಬೆಂಗಳೂರಿನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. “ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು” ಎಂದು ಆಗ್ರಹಿಸಿ ಇಂದು ಕರವೇ ನಾರಾಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಬೆಂಗಳೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಕೂಡ ಭುಗಿಲೆದ್ದಿದೆ. ಸುಪ್ರೀಂ ಕೋರ್ಟ್‌ ಸೂಚನೆ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್​ಎಸ್ ಪಕ್ಷ ಕರೆ ಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ: 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ದೇಶನ

ಕನ್ನಡ ಪರ ಹೋರಾಟಗಾರರು ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಸುಪ್ರೀಂಕೋರ್ಟ್​ ಸೂಚನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆ ಮರಣ ಶಾಸನ ಎಂದು ಕಣ್ಣೀರಿಟ್ಟಿದ್ದು, ರಾಜ್ಯದ ಎಲ್ಲ ಸಂಸದರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...