ಕಾವೇರಿ ವಿವಾದ | ರೈತರ ಹೋರಾಟಕ್ಕೆ ನಿರ್ಮಲಾನಂದ ಸ್ವಾಮಿ ಬೆಂಬಲ

Date:

ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಅದೇಶ ಹೊರಡಿಸಿದೆ. ನೀರು ಹರಿಸುವುದನ್ನು ಖಂಡಿಸಿ ಮಂಡ್ಯ, ಮೈಸೂರು ಭಾಗದ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರ ಪ್ರತಿಭಟನೆಗೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿ ಬೆಂಬಲ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿರುವ ನಿರ್ಮಲಾನಂದ ಸ್ವಾಮಿ, “ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಪ್ರಜೆಗಳ ಹಿತವನ್ನು ಕಾಪಾಡುವ ಕೆಲಸವನ್ನು ಸರ್ಕಾರಗಳು ಮಾಡಬೇಕು. ಈಗ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವ ಅನಿವಾರ್ಯ ಸ್ಥಿತಿ ಇದೆ. ಇದೇ ಹೊತ್ತಿನಲ್ಲಿ, ವಸ್ತುಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್​ಗೆ ಸರ್ಕಾರ ಸರಿಯಾಗಿ ಮನವರಿಕೆ ಮಾಡಿಕೊಡಬೇಕು” ಎಂದು ಹೇಳಿದ್ದಾರೆ.

“ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ಆದಷ್ಟು ಬೇಗ ಮೇಕೆದಾಟು ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಬೇಕು. ಆ ಮೂಲಕ ರೈತರಿಗೆ ಅನುಕೂಲ ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...