ಕಾವೇರಿ ಹೋರಾಟದಲ್ಲಿ ಭಾಗಿಯಾಗುತ್ತಾರೆ : ಚಿತ್ರ ನಟರು ಬೀದಿಗಿಳಿಯದ ಬಗ್ಗೆ ಅಭಿಷೇಕ್ ಪ್ರತಿಕ್ರಿಯೆ

Date:

ಕಾವೇರಿ ಹೋರಾಟಕ್ಕೆ ಚಿತ್ರರಂಗದ ನಟರು ಬೆಂಬಲ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೋರಾಟವನ್ನು ಬೆಂಬಲಿಸಿದ್ದಾರೆ. ಹೋರಾಟಗಳು ಬೀದಿಯಲ್ಲಿ ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲೂ ನಡೆಯಬೇಕು ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದ್ದಾರೆ.

ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ, ನಟರು ಬರೀ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಹಾಕಿ ಸುಮ್ಮನಾಗಿದ್ದಾರೆ. ಹೋರಾಟಕ್ಕೆ ಯಾಕೆ ಬಂದಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. “ಹೋರಾಟ ಎಲ್ಲಡೆ ನಡೆಯಬೇಕು. ಸಾಮಾಜಿಕ ಜಾಲತಾಣದಲ್ಲೂ ನಡೆಯಬೇಕು. ಈಗ ಸೋಷಿಯಲ್ ಮೀಡಿಯಾದಲ್ಲಿ ಬೆಂಬಲ ನೀಡಿ ಪೋಸ್ಟ್‌ ಹಾಕಿದ್ದಾರೆ. ಮುಂದೆ, ಹೋರಾಟದಲ್ಲೂ ಭಾಗಿಯಾಗುತ್ತಾರೆ ಎಂಬ ವಿಶ್ವಾಸವಿದೆ” ಎಂದರು.

“ಫಿಲ್ಮ್‌ ಚೇಂಬರ್‌ನಿಂದ ‘ಒಂದು ವೇದಿಕೆ ಸೃಷ್ಟಿ ಮಾಡುತ್ತೇವೆ. ಚಿತ್ರನಟರು ಭಾಗಿಯಾಗಲಿದ್ದಾರೆ. ಕಾವೇರಿ ನೀರು ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ನೀರಿನ ಸಮಸ್ಯೆಯಿಂದ ರೈತರಿಗೆ ಮಾತ್ರವಲ್ಲ. ಮುಂದೆ, ಬೆಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆಯಾಗುತ್ತದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...