ಕಾವೇರಿ ವಿವಾದ | ಸುಪ್ರೀಂಗೆ ಅರ್ಜಿ ಸಲ್ಲಿಸಿದ ಇಬ್ಬರು ರೈತರು

Date:

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸದಂತೆ ಸೂಚನೆ ನೀಡುವಂತೆ ಮನವಿ ಕೋರಿದ್ದಾರೆ.

ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು ರಾಜ್ಯ ಸರ್ಕಾರ ಹೇಳಿದೆ. ಅಲ್ಲದೆ, ದೆಹಲಿಯಲ್ಲಿ ಸಚಿವರು ಹಾಗೂ ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಹಲವು ಸಚಿವರು ಸಭೆ ನಡೆಸುತ್ತಿದ್ದಾರೆ. ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ದಾವೆ ಹೂಡಿದ್ದಾರೆ. ಇದೀಗ, ಇಬ್ಬರು ರೈತರು ಅರ್ಜಿ ಸಲ್ಲಿಸುವ ಮೂಲಕ ಕಾವೇರಿ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತರಿಕೇರೆ ಗ್ರಾಮದ ರೈತ ಕೆಂಪರಾಜು ಮತ್ತು ಪಾಂಡವಪುರದ ನಿವೃತ ಯೋಧ, ರೈತ ಆರ್.ಪಿ ರವಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಅರ್ಜಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...